ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಮಹಿಳಾ ಘಟಕ ಹಾಗೂ ಕುಲಾಲ ಸೇವಾದಳದ ಸಹಯೋಗದೊಂದಿಗೆ 25ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಿತು.
ವರಮಹಾಲಕ್ಷ್ಮೀ ವೃತಾ ಪೂಜೆಯ ಪ್ರಾರಂಭದಲ್ಲಿ ಮಹಿಳಾ ಘಟಕದ ಸದಸ್ಯೆಯರಿಂದ ಭಜನೆ ನಡೆಯಿತು.
ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಮಚ್ಚೇಂದ್ರನಾಥ ಸಾಲ್ಯಾನ್, ಅಧ್ಯಕ್ಷ ರಮೇಶ್ ಸಾಲ್ಯಾನ್ ಸಂಚಯಗಿರಿ, ಉಪಾಧ್ಯಕ್ಷ ಗಣೇಶ್ ಮರ್ದೋಳಿ, ಕಾರ್ಯದರ್ಶಿ ಸತೀಶ್ ಸಂಪಾಜೆ, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಜಯಂತ ಬಂಗೇರ, ಪ್ರೇಮಜನಾರ್ದನ್ ಪೊಸಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ವಾರಿಜಾ ಚೇತನ್, ಸೇವಾದಳಪತಿ ಚಂದ್ರಶೇಖರ ಕಾಮಾಜೆ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು, ಮಹಿಳಾ ಘಟಕದ ಪದಾಧಿಕಾರಿಗಳು, ಸೇವಾದಳದ ಸದಸ್ಯರು, ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಸ್ಥಾನದ ಅಧ್ಯಕ್ಷ ಬಿ. ಮೋಹನ್ , ನಿಕಟಪೂರ್ವಾಧ್ಯಕ್ಷ ವಿಶ್ವನಾಥ ಬಿ., ಮತ್ತಿತರರು ಪೂಜೆಯಲ್ಲಿ ಪಾಲ್ಗೊಂಡರು