ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯ ಆಶ್ರಯದಲ್ಲಿ 14ರಿಂದ 17ರ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕಕ್ಯಪದವಿನ ಎಲ್.ಸಿ.ಆರ್. ವಿದ್ಯಾಸಂಸ್ಥೆಯ ನಮನ್ ಶೆಟ್ಟಿ ತೃತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿಯಾಗಿರುವ ಈತ ಎಂ ಚಂದ್ರಹಾಸ ಶೆಟ್ಟಿ ಮತ್ತು ವಿನಯ ರೈ ದಂಪತಿ ಪುತ್ರ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ತರಬೇತಿ ನೀಡಿದ್ದಾರೆ. ಕೊಪ್ಪಳದಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಗಿ ಪ್ರಿನ್ಸಿಪಾಲ್ ಜೋಸ್ಟನ್ ಲೋಬೋ ಸಂಯೋಜಕರಾದ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ವಿಜಯ ಕೆ ತಿಳಿಸಿದ್ದಾರೆ.