ಆಹಾರ, ನಾಗರಿಕ ಸರಬುರಾಜು ಇಲಾಖೆ ವತಿಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡುತ್ತಿರುವ ಪಡಿತರ ಅಕ್ಕಿಯು ಪದೇ ಪದೇ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ತುಂಬಾ ತೊಂದರೆಯಾಗಿದ್ದು ಪರಿಹಾರಕ್ಕೆ ತಾಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.
ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ತಲುಪದೇ ತುಂಬಾ ಅಡಚಣೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪದೇ ಪದೇ ಸರ್ವರ್ ತೊಂದರೆಯಿಂದ ಗ್ರಾಹಕರು ತಮ್ಮ ಪಡಿತರ ಅಕ್ಕಿ ಪಡೆಯಲು ಸಂಬಂಧ ಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ದಿನಾ ಪೂರ್ತಿಯಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ ಎಂದವರು ದೂರಿದ್ದಾರೆ.
(more…)