oplus_3145728
ಬಿ.ಸಿ.ರೋಡಿನ ಹೃದಯಭಾಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಉದ್ಘಾಟನೆ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ೧೭೨ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ದವ ಹಾಗೂ ವಿದ್ಯಾರ್ಥಿವೇತನ ವಿತರಣೆ ಮತ್ತು ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆಯಿತು.
ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿದ ಬ್ರಹ್ಮಶ್ರೀ ನಾರಾಯಣಗುರು ವೃತ್ತವನ್ನು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿದರು. ಈ ವೃತ್ತದ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವಹಿಸಲಿದೆ. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಯಾ. ಚೌಟ, ಮೌನ ಕ್ರಾಂತಿಯ ಮೂಲಕ ಸಮಾಜಕ್ಕೆ ಬೆಳಕಾದ ಶ್ರೇಷ್ಠ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ, ತತ್ವ ಪಾಲನೆಯನ್ನು ಮಾಡುವುದು ಇಂದು ಅಗತ್ಯ. ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮಾತನಾಡಿ, ತನ್ನ ತಂದೆಯವರಾದ ಸೇಸಪ್ಪ ಕೋಟ್ಯಾನ್ ಹಿಂದಿನ ಬಾರಿ ಬ್ರಹ್ಮಶ್ರಿ ನಾರಾಯಣಗುರು ವೃತ್ತ ಉದ್ಘಾಟಿಸಿದರೆ, ಇಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿಕೊಟ್ಟ ಸುಂದರ ವೃತ್ತದ ಅದ್ದೂರಿಯಾದ ಉದ್ಘಾಟನಾ ಕಾರ್ಯ ಜನಸಾಗರದ ಮಧ್ಯೆ ಗಣ್ಯರಿಂದ ನಡೆದಿದ್ದು, ಇದು ತನ್ನ ಅಧ್ಯಕ್ಷತೆ ಅವಧಿಯಲ್ಲಿ ನಡೆದಿರುವುದು ಸಂತಸ ತಂದಿದೆ ಎಂದರು. ಸಂಘಟನೆಯ ಬಲವರ್ಧನೆಗೆ ಸರ್ವರೂ ಉತ್ತಮ ಸಹಕಾರ ನೀಡುತ್ತಿರುವುದನ್ನು ಪ್ರಸ್ತಾಪಿಸಿದ ಅವರು, ವಿದ್ಯಾರ್ಥಿವೇತನಕ್ಕೆ ಸಮಾಜದ ಸಹಕಾರ ಇನ್ನಷ್ಟು ಬರಲಿ ಎಂದರು
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಬ್ರಹ್ಮಶ್ರೀ ನಾರಾಯಣಗುರುಗಳು ಅಪ್ರತಿಮ ರಾಷ್ಟ್ರಭಕ್ತರು. ಅಂಧಕಾರದಿಂದ ಜ್ಞಾನದೆಡೆ ಸಾಗುವಂತೆ ಮಾಡಿದ ಶ್ರೇಷ್ಠ ಸಂತ. ಇಂದಿನ ಯುವಪೀಳಿಗೆ ಅವರ ತತ್ವಾದರ್ಶ ಕುರಿತು ಮಾಹಿತಿ ಇರಬೇಕು ಎಂದರು. ಸಮಾಜಕ್ಕೆ ಸಾಮರಸ್ಯ ಸಹಬಾಳ್ವೆ ಸಮಾನತೆಯ , ಮಾನವ ಧರ್ಮವೇ ಶ್ರೇಷ್ಠ ಧರ್ಮ ಎಂಬುದಾಗಿ ಸಂದೇಶವನ್ನು ಸಾರಿದ ಸಂತ, ಸಮಾಜ ಸುಧಾರಕ, ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳು ಸರ್ವಕಾಲಕ್ಕೂ ಅನ್ವಿಯಿಸುತ್ತದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳು ದಾರ್ಶನಿಕರಷ್ಟೇ ಅಲ್ಲದೆ, ಪೂಜನೀಯರು. ಅವರ ಮಹತ್ವವನ್ನು ಮಹಾತ್ಮಾ ಗಾಂಧೀಜಿ, ಪೋಪ್ ಸಹಿತ ಎಲ್ಲರೂ ಉಲ್ಲೇಖಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಸ್ವಾಭಿಮಾನದ ಬದುಕು ನೀಡಲು ಶ್ರಮಿಸಿದವರು. ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಘೋಷಿಸಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಜೀಪಮೂಡದ ಜ್ಞಾನ ಮಂದಿರದಲ್ಲಿ ಮನವಿ ಮಾಡಿದ್ದನ್ನು ನೆನಪಿಸಿದ ಅವರು, ಶಿವಗಿರಿ ಮಠದ ಶಾಖಾ ಮಠ ಬಂಟ್ವಾಳ ತಾಲೂಕಿನ ನಾವೂರಿನಲ್ಲಿ ಸ್ಥಾಪನೆಯಾಗಲಿದೆ ಎಂದರು
ಬಂಟ್ವಾಳ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದು, ಮಾತನಾಡಿ ವಿದ್ಯೆಯ ಮಹತ್ವವನ್ನು ಇಂದು ವಿದ್ಯಾರ್ಥಿವೇತನ ಪಡೆದವರೆಲ್ಲರೂ ಅರಿಯಬೇಕು ಎಂದರು.
ವೇದಿಕೆಯಲ್ಲಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜೊತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಶಂಭೂರು, ಕೋಶಾಧಿಕಾರಿ ಸುನೀಲ್ ಎಸ್. ಕುಂದರ್ ಮೊಡಂಕಾಪು, ಲೆಕ್ಕಪರಿಶೋಧಕ ಪ್ರಶಾಂತ್ ಕೋಟ್ಯಾನ್ ಸಂಚಯಗಿರಿ, ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ, ಯುವವಾಹಿನಿ ಅಧ್ಯಕ್ಷ ಕಿರಣ್ ಪೂಂಜರಕೋಡಿ ಉಪಸ್ಥಿತರಿದ್ದರು. ಪ್ರೇಮನಾಥ ಕರ್ಕೇರ ವಿದ್ಯಾರ್ಥಿವೇತನ ಪುರಸ್ಕೃತರ ಪಟ್ಟಿ ವಾಚಿಸಿದರು.
ಬಿಲ್ಲವ ಸಮಾಜ ಸೇವಾ ಸಂಘ ಉಪಾಧ್ಯಕ್ಷ ಜಯಪ್ತಕಾಶ್ ಜೆ.ಎಸ್. ಜಕ್ರಿಬೆಟ್ಟು ಸ್ವಾಗತಿಸಿದರು. ಇಂಜಿನಿಯರ್ ಸುಜಯ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ವಂದಿಸಿದರು.
ಗುರುಮಂದಿರದಲ್ಲಿ ಬೆಳಿಗ್ಗೆ ಗಂಟೆ 7ರಿಂದ 8.30 ಭಜನಾ ಕಾರ್ಯಕ್ರಮ,: ಗುರು ಪೂಜೆ, ಮಹಾಪೂಜೆ ನಡೆಯಿತು, 11ಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ಬಳಿಕ ಸಭಾ ಕಾರ್ಯಕ್ರಮ, ವಿದ್ಯಾರ್ಥಿವೇತನ ವಿತರಣೆ ಮಧ್ಯಾಹ್ನ ಅನ್ನಸಂತರ್ಪಣೆ. ಬಳಿಕ ದೇಯಿ ಬೈದೇತಿ ಚಲನಚಿತ್ರ ಪ್ರದರ್ಶನ. ನಡೆಯಿತು.
(more…)