ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೊಳಿ ಸಮೀಪ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದೆ. ಪರಿಣಾಮ ಚಾಲಕ ಪಪ್ಪು ಚೌಹಾನ್ ಲಾರಿಯೊಳಗೆ ಸಿಲುಕಿಕೊಂಡಿದ್ದರು. ಆದರೆ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅವರು ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಂಟ್ವಾಳ ಟ್ರಾಫಿಕ್ ಠಾಣೆಯ ಎಸ್ಐ ಆದರ್ಶ್ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿತು.
ನಂತರ ನಾಗೇಶ್ ಪೂಜಾರಿ ಅವರ ನೇತೃತ್ವದಲ್ಲಿ ಕ್ರೇನ್ ಸಹಾಯದಿಂದ ಪಲ್ಟಿಯಾದ ಲಾರಿಯನ್ನು ತೆರವುಗೊಳಿಸಲಾಗಿದ್ದು, ಬಳಿಕ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು
(more…)