
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆಪ್ ಮೂಲಕ ನಡೆಸಲು ಕೃಷಿ ಇಲಾಖೆ ಸೂಚನೆ ಹೊರಡಿಸಿದೆ.
2026 ರಿಂದ 27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಗೆ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ನೀಡುವ ಕಾರ್ಯವಿದು.

ಬೆಳೆ ಸಮೀಕ್ಷೆಯಲ್ಲಿ ರೈತರು ನೇರವಾಗಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತ: ತಾವೇ ಪ್ಲೇಸ್ಟೋರ್ ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ 2026 ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಂಡು ಅದರ ಮೂಲಕ ತಾವು ಬೆಳೆದ ಬೆಳೆಗಳ ಛಾಯಚಿತ್ರ ಮತ್ತು ಬೆಳೆ ವಿವರಗಳನ್ನು ಆಪ್ಲೋಡ್ ಮಾಡಬಹುದು ಎಂದು ಇಲಾಖೆ ತಿಳಿಸಿದೆ.
ಸಾಧ್ಯವಾಗದಿದ್ದಲ್ಲಿ ಏನು ಮಾಡಬಹುದು?
ರೈತರಿಗೆ ಅಪ್ ಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ ತಾಲೂಕು ಆಡಳಿತ ನೇಮಿಸಿರುವ ಮೊಬೈಲ್ ತಂತ್ರಾಂಶ ಜ್ಞಾನವುಳ್ಳ ಖಾಸಗಿ ನಿವಾಸಿಗಳ ಸಹಾಯದಿಂದ ಬೆಳೆ ವಿವರ ದಾಖಲಿಸಬಹುದು. ರೈತರು ಅಥವಾ ಖಾಸಗಿ ನಿವಾಸಿಗಳು ಛಾಯಾಚಿತ್ರದೊಂದಿಗೆ ನಮೂದಿಸಿದ ಬೆಳೆ ಮಾಹಿತಿಯನ್ನು ತಾಲೂಕು ಆಡಳಿತ ಪರಿಶೀಲಿಸಿ ಅನುಮೋದಿಸುತ್ತದೆ.

ರೈತರು ಬೆಳೆ ಸಮೀಕ್ಷೆಯ ಮಾಹಿತಿಯನ್ನು ಪರಿಶೀಲಸಿಕೊಳ್ಳಬಹುದು. ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನೇರವಾಗಿ ತಮ್ಮ ಆಕ್ಷೇಪಣೆಯನ್ನು ಬೆಳೆ ದರ್ಶಕ ಮೊಬೈಲ್ ಆಪ್ ನಲ್ಲಿ ದಾಖಲಿಸಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಕೃಷಿ ಇಲಾಖೆ, ಗ್ರಾಮ ಆಡಳಿತಾಧಿಕಾರಿ, ಕಂದಾಯ ಇಲಾಖೆ, ತೋಟಗಾರಿಕಾ ಅಧಿಕಾರಿಯವರನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಬೆಳೆ ಸಮೀಕ್ಷೆ ಆಗದ ರೈತರಿಗೆ ಮುಂದಿನ ಸಾಲಿನಲ್ಲಿ ಬೆಳೆ ವಿಮೆ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇರುವುದಿಲ್ಲ. ಬೆಳೆ ವಿಮೆ ನೋಂದಣೆಯಾದ ರೈತರು ಸ್ವತ ಬೆಳೆ ಸಮೀಕ್ಷೆ ಕೈಗೊಳ್ಳುವುದರಿಂದ ಬೆಳೆ ವಿಮೆ ಪಡೆಯುವಲ್ಲಿ ಸಹಕಾರಿಯಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.


Be the first to comment on "ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ: ರೈತರಿಗೆ ಸೂಚನೆ"