ಬಂಟ್ವಾಳ

ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ: ರೈತರಿಗೆ ಸೂಚನೆ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಮೊಬೈಲ್  ಆಪ್ ಮೂಲಕ ನಡೆಸಲು ಕೃಷಿ ಇಲಾಖೆ ಸೂಚನೆ ಹೊರಡಿಸಿದೆ.

2026 ರಿಂದ 27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಗೆ ರೈತರು ತಮ್ಮ ಜಮೀನಿನಲ್ಲಿ  ಬೆಳೆದ  ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ  ತಂತ್ರಾಂಶದ  ಮೂಲಕ ನೀಡುವ ಕಾರ್ಯವಿದು.

VNR GOLD

ಬೆಳೆ ಸಮೀಕ್ಷೆಯಲ್ಲಿ ರೈತರು ನೇರವಾಗಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು,  ತಾವು ಬೆಳೆದ  ಬೆಳೆಗಳ ಮಾಹಿತಿಯನ್ನು ಸ್ವತ: ತಾವೇ ಪ್ಲೇಸ್ಟೋರ್ ನಲ್ಲಿ  ಮುಂಗಾರು  ರೈತರ ಬೆಳೆ  ಸಮೀಕ್ಷೆ 2026 ಮೊಬೈಲ್ ಆಪ್ ಡೌನ್ ಲೋಡ್  ಮಾಡಿಕೊಂಡು ಅದರ ಮೂಲಕ  ತಾವು ಬೆಳೆದ ಬೆಳೆಗಳ ಛಾಯಚಿತ್ರ ಮತ್ತು ಬೆಳೆ ವಿವರಗಳನ್ನು ಆಪ್ಲೋಡ್ ಮಾಡಬಹುದು ಎಂದು ಇಲಾಖೆ ತಿಳಿಸಿದೆ.

ಜಾಹೀರಾತು

ಸಾಧ್ಯವಾಗದಿದ್ದಲ್ಲಿ ಏನು ಮಾಡಬಹುದು?

ರೈತರಿಗೆ ಅಪ್ ಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ ತಾಲೂಕು ಆಡಳಿತ ನೇಮಿಸಿರುವ ಮೊಬೈಲ್ ತಂತ್ರಾಂಶ ಜ್ಞಾನವುಳ್ಳ ಖಾಸಗಿ ನಿವಾಸಿಗಳ ಸಹಾಯದಿಂದ ಬೆಳೆ ವಿವರ ದಾಖಲಿಸಬಹುದು. ರೈತರು  ಅಥವಾ ಖಾಸಗಿ ನಿವಾಸಿಗಳು ಛಾಯಾಚಿತ್ರದೊಂದಿಗೆ ನಮೂದಿಸಿದ ಬೆಳೆ ಮಾಹಿತಿಯನ್ನು ತಾಲೂಕು ಆಡಳಿತ ಪರಿಶೀಲಿಸಿ ಅನುಮೋದಿಸುತ್ತದೆ.

D.SHIVA BHAT JWELLERS

ರೈತರು ಬೆಳೆ ಸಮೀಕ್ಷೆಯ ಮಾಹಿತಿಯನ್ನು ಪರಿಶೀಲಸಿಕೊಳ್ಳಬಹುದು. ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನೇರವಾಗಿ ತಮ್ಮ ಆಕ್ಷೇಪಣೆಯನ್ನು ಬೆಳೆ ದರ್ಶಕ ಮೊಬೈಲ್ ಆಪ್ ನಲ್ಲಿ ದಾಖಲಿಸಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಕೃಷಿ ಇಲಾಖೆ, ಗ್ರಾಮ ಆಡಳಿತಾಧಿಕಾರಿ, ಕಂದಾಯ ಇಲಾಖೆ, ತೋಟಗಾರಿಕಾ ಅಧಿಕಾರಿಯವರನ್ನು  ಸಂಪರ್ಕಿಸಬಹುದು ಎಂದು ಬಂಟ್ವಾಳ ಸಹಾಯಕ ಕೃಷಿ  ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

OPTIC WORLD

ಪ್ರಸಕ್ತ ಸಾಲಿನಲ್ಲಿ ಬೆಳೆ ಸಮೀಕ್ಷೆ ಆಗದ ರೈತರಿಗೆ  ಮುಂದಿನ ಸಾಲಿನಲ್ಲಿ ಬೆಳೆ ವಿಮೆ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇರುವುದಿಲ್ಲ. ಬೆಳೆ ವಿಮೆ ನೋಂದಣೆಯಾದ ರೈತರು ಸ್ವತ ಬೆಳೆ ಸಮೀಕ್ಷೆ ಕೈಗೊಳ್ಳುವುದರಿಂದ ಬೆಳೆ ವಿಮೆ ಪಡೆಯುವಲ್ಲಿ ಸಹಕಾರಿಯಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.