ಬಂಟ್ವಾಳ: ನಿವೃತ್ತ ಮುಖ್ಯೋಪಾಧ್ಯಾಯ ಬಿ.ರಾಮಚಂದ್ರ ರಾವ್ ಅವರು ಸ್ವಂತ ಖರ್ಚಿನಲ್ಲಿ ತಮ್ಮ ಮನೆ ಎದುರು ಇದ್ದ ಚರಂಡಿಯನ್ನು ಹೂಳೆತ್ತುವ ಮೂಲಕ ಪುರಸಭೆ ಮಾಡಬೇಕಾದ ಕಾರ್ಯವನ್ನು ಮಾಡಿ ಗಮನ ಸೆಳೆದಿದ್ದಾರೆ. ಮಳೆಗಾಲ ಆರಂಭಗೊಂಡು ತಿಂಗಳೆರಡಾದರೂ ಕೆಲಸವಾಗದೇ ಇದ್ದಾಗ ರಾವ್ ಅವರು ಸ್ವತಃ ವೆಚ್ಚ ಭರಿಸಿ ಕೆಲಸ ನಿರ್ವಹಿಸುವುದರ ಮೂಲಕ ಗಮನ ಸೆಳೆದಿದ್ದಾರೆ.
VNR GOLD
ಮಳೆಗಾಲದ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕುಂಜೆ 14 ನೇ ವಾರ್ಡು ಪರಿಸರದ ರೈಲ್ವೆ ಸ್ಟೇಶನ್ ನಿಂದ ಕೈಕುಂಜೆ ಪೂರ್ವ ಬಡಾವಣೆಗೆ ತಿರುಗುವ ರಸ್ತೆಯ ರಸ್ತೆ ಬದಿಯ ತೋಡಿನಲ್ಲಿ ಭಾರಿ ಪ್ರಮಾಣದ ಮಣ್ಣು ತುಂಬಿಕೊಂಡಿತ್ತು. ಇದರಿಂದಾಗಿ ಮಳೆನೀರು ಹರಿಯಲು ದಾರಿಯಿಲ್ಲದೆ, ಸ್ಥಳೀಯ ರಸ್ತೆಗೆ ಕೆಸರು ನುಗ್ಗಿತ್ತು.
OPTIC WORLD
ಸಮಸ್ಯೆಯ ಕುರಿತು ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ. ರಾಮಚಂದ್ರ ರಾವ್ ಸ್ಥಳೀಯರೊಂದಿಗೆ ಸೇರಿ ಹಲವು ಬಾರಿ ಲಿಖಿತ ಮನವಿಗಳನ್ನು ಸಲ್ಲಿಸಿದ್ದರೂ ಸ್ಪಂದನೆ ದೊರಕದೇ ಇದ್ದಾಗ ಸಾರ್ವಜನಿಕರ ಹಿತದೃಷ್ಟಿಯಿಂದ ಕೊನೆಗೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಜೆಸಿಬಿ ಹಾಗೂ ಕಾರ್ಮಿಕರನ್ನು ಬಳಸಿ ತೋಡಿನ ಹೂಳೆತ್ತುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸ್ವಂತ ಖರ್ಚಿನಲ್ಲಿ ಚರಂಡಿ ಹೂಳೆತ್ತಿದ ನಿವೃತ್ತ ಮುಖ್ಯೋಪಾಧ್ಯಾಯರು!"
Be the first to comment on "ಸ್ವಂತ ಖರ್ಚಿನಲ್ಲಿ ಚರಂಡಿ ಹೂಳೆತ್ತಿದ ನಿವೃತ್ತ ಮುಖ್ಯೋಪಾಧ್ಯಾಯರು!"