ಬೋಳಂತೂರಿನ ದ.ಕ.ಜಿಪಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ 14ರ ವಯೋಮಿತಿಯ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು.
ನಿವೃತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ ವಿ ಕಲ್ಲಡ್ಕ ಉದ್ಘಾಟಿಸಿ ಕ್ರೀಡೆಯಲ್ಲಿ ಶಿಸ್ತು ಬಹಳ ಪ್ರಾಮುಖ್ಯತೆ ಪಡೆಡಿದ್ದು, ತೀರ್ಪುಗಾರರ ತೀರ್ಮಾನಕ್ಕೆ ತಲೆಬಾಗಿ ಕ್ರೀಡಾ ಸ್ಪೂರ್ತಿಯಿಂದ ಕ್ರೀಡಾಕೂಟದ ನೀತಿ ನಿಯಮಗಳಿಗೆ ಬದ್ಧರಾಗಿ ಎಂದರು.
ಸ್.ಡಿ.ಎಂ.ಸಿ.ಅಧ್ಯಕ್ಷ ಬಶೀರ್ ನಾರಂಕೋಡಿ ಅಧ್ಯಕ್ಷತೆ ವಹಿಸಿದರು. ಪ್ರಭಾರ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಶುಭ ಹಾರೈಸಿದರು.
ಶಾಲೆಗಳಲ್ಲಿ ಕಬಡ್ಡಿ ಪಂದ್ಯಗಳನ್ನು ಇನ್ನು ಹೆಚ್ಚಿನ ಪ್ರೋತ್ಸಾಹದೊಂದಿಗೆ ಆಯೋಜಿಸೋಣ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಹೇಳಿದರು.
ಅಕ್ಷಯ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕ ಇಬ್ರಾಹಿಂ ಕರೀಂ, ಬಿಕೆ ಬಾಯ್ಸ್ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಮುಸ್ತಾಪ ಬಂಗಾರ್ಕೋಡಿ , ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಅಶ್ರಫ್, ಅನ್ಸಾರ್, ಸ್ವಚ್ಛತಾ ಪ್ರೇಮಿ ಹಮೀದ್, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಇಂದುಶೇಖರ್, ಕಲ್ಲಡ್ಕ ಕ್ಲಸ್ಟರ್ ನ ಸಿ .ಆರ್.ಪಿ. ಜ್ಯೋತಿ, ಕಲ್ಲಡ್ಕ ವಲಯದ ಪಂದ್ಯಾಟಗಳ ನೋಡಲ್ ಜಗದೀಶ್ ಬಾಳ್ತಿಲ, ಶಾಲಾ ಮುಖ್ಯ ಶಿಕ್ಷಕಿ ಸುಜಾತ ಎಂ, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ, ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹರೀಶ್ ಸ್ವಾಗತಿಸಿ, ಶಿಕ್ಷಕಿ ರೂಪಶ್ರೀ ಕಾರ್ಯಕ್ರಮ ನಿರೂಪಿಸಿದರು.