ಸತತ ದ್ವಿತೀಯ ಬಾರಿ ರಾಜ್ಯಮಟ್ಟದ ಸ್ಪರ್ಧೆಗೆ ಸಾನ್ವಿ ಕೃಷ್ಣ ಕುಲಾಲ್ ಆಯ್ಕೆ

VNR GOLD

ಬಂಟ್ವಾಳ: ಬಿ.ಸಿ ರೋಡಿನ  ಕೃಷ್ಣ ಕುಲಾಲ್ (ಪೊಲೀಸ್ ಇಲಾಖೆ) ಮತ್ತು ಅಶ್ವಿನಿ‌ ದಂಪತಿ ಪುತ್ರಿ ಸಾನ್ವಿ ಕೃಷ್ಣ ಕುಲಾಲ್ ಅವರು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಳ್ಳಾರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ  ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಕೆ ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿ ಅಂಗ್ಲ ಮಾದ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ. 2025 ನೇ ಸಾಲಿನಲ್ಲಿ ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್‌ ಇಂಡಿಯಾ‌ ಆಶ್ರಯದಲ್ಲಿ  ಮಹಾರಾಷ್ಟ್ರ ರಾಜ್ಯದ ಬಾರಮತಿ ಯಲ್ಲಿ ನಡೆದ 69 ನೇ ರಾಷ್ಡ್ರೀಯ ಸ್ಕೂಲ್ ಗೇಮ್ಸ್ 2025-26  ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಲ್ಲಿ ಭಾಗವಹಿಸಿದ್ದರು.

D.SHIVA BHAT JWELLERS

2024ರಲ್ಲಿ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. 2026ನೇ ಸಾಲಿನಲ್ಲಿ ಬಂಟ್ವಾಳದಲ್ಲಿ ನಡೆದ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ 2026 ಯನ್ನು  ನೀಡಿ  ಸನ್ಮಾನಿಸಲಾಗಿತ್ತು. 2024ರಲ್ಲಿ ಕರಾಟೆಯಲ್ಲಿ  ಬ್ಲ್ಯಾಕ್ ಬೆಲ್ಟ್ ಪಡೆದುಕೊಂಡಿದ್ದು, ಬಂಟ್ವಾಳ‌ ಅಶೋಕ್‌ ಆಚಾರ್ಯ ಅವರ ಶಿಷ್ಯೆ.

ಜಾಹೀರಾತು
OPTIC WORLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸತತ ದ್ವಿತೀಯ ಬಾರಿ ರಾಜ್ಯಮಟ್ಟದ ಸ್ಪರ್ಧೆಗೆ ಸಾನ್ವಿ ಕೃಷ್ಣ ಕುಲಾಲ್ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*