ಬಂಟ್ವಾಳ: ಬಿ.ಸಿ ರೋಡಿನ ಕೃಷ್ಣ ಕುಲಾಲ್ (ಪೊಲೀಸ್ ಇಲಾಖೆ) ಮತ್ತು ಅಶ್ವಿನಿ ದಂಪತಿ ಪುತ್ರಿ ಸಾನ್ವಿ ಕೃಷ್ಣ ಕುಲಾಲ್ ಅವರು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಳ್ಳಾರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈಕೆ ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿ ಅಂಗ್ಲ ಮಾದ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ. 2025 ನೇ ಸಾಲಿನಲ್ಲಿ ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಆಶ್ರಯದಲ್ಲಿ ಮಹಾರಾಷ್ಟ್ರ ರಾಜ್ಯದ ಬಾರಮತಿ ಯಲ್ಲಿ ನಡೆದ 69 ನೇ ರಾಷ್ಡ್ರೀಯ ಸ್ಕೂಲ್ ಗೇಮ್ಸ್ 2025-26 ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಲ್ಲಿ ಭಾಗವಹಿಸಿದ್ದರು.
2024ರಲ್ಲಿ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. 2026ನೇ ಸಾಲಿನಲ್ಲಿ ಬಂಟ್ವಾಳದಲ್ಲಿ ನಡೆದ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ 2026 ಯನ್ನು ನೀಡಿ ಸನ್ಮಾನಿಸಲಾಗಿತ್ತು. 2024ರಲ್ಲಿ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದುಕೊಂಡಿದ್ದು, ಬಂಟ್ವಾಳ ಅಶೋಕ್ ಆಚಾರ್ಯ ಅವರ ಶಿಷ್ಯೆ.