ಶುಕ್ರವಾರ ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಕೃಷ್ಣ ಜಯಂತಿ ಆಚರಣೆ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಮಾತನಾಡಿ, ನಾವು ಧರ್ಮ ಮಾರ್ಗದಲ್ಲಿ ನಡೆಯಬೇಕು. ಶ್ರೀಕೃಷ್ಣ ಬೇರೆ ಬೇರೆ ಸಂದರ್ಭಗಳಲ್ಲಿ ನಾವು ಯಾವ ರೀತಿ ಬದುಕಬೇಕು ಎಂಬುದನ್ನು ತೋರಿಸಿದ್ದು, ಮಕ್ಕಳಿಗೆ ಇದರ ಅರಿವು ಮೂಡಿಸಬೇಕು. ಇಂದು ಮೌಲ್ಯಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಶ್ರೀಕೃಷ್ಣ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಹಿನ್ನೆಲೆಯಲ್ಲಿ ಇಡೀ ಸಮಾಜವೇ ಕೃಷ್ಣಜಯಂತಿ ಆಚರಿಸುತ್ತದೆ ಎಂದರು.https://www,bantwalnews.com

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಶ್ರೀಕೃಷ್ಣನ ಸಂದೇಶಗಳು ಸಮಸ್ತ ಸಮಾಜಕ್ಕೆ ತಿಳಿಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಮಾತನಾಡಿ ಶ್ರೀಕೃಷ್ಣನ ಬದುಕು, ಸಂದೇಶಗಳು ಸರ್ವರಿಗೂ ಮಾರ್ಗದರ್ಶಿ ಎಂದರು.
ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಯಾದವ ಸಭಾ ಪ್ರತಿನಿಧಿಗಳು, ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಷುಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಕಂದಾಯ ಇಲಾಖೆ ಸಿಬ್ಬಂದಿ ಜನಾರ್ದನ್ ವಂದಿಸಿದರು.



Be the first to comment on "BANTWAL: ಬಂಟ್ವಾಳ ತಾಲೂಕು ಮಟ್ಟದ ಶ್ರೀಕೃಷ್ಣ ಜಯಂತಿ ಆಚರಣೆ"