ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಸರ್ಕಾರಿ ಪಾಲಿಟೆಕ್ನಿಕ್  ಬಂಟ್ವಾಳದ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್ ) ಹಾಗೂ ಯೂತ್ ರೆಡ್‌ಕ್ರಾಸ್ ಘಟಕ ವತಿಯಿಂದ ಮಂಗಳೂರು ಕೆ.ಎಂ.ಸಿ  ಆಸ್ಪತ್ರೆ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ಸಂಸ್ಥೆಯ ಆವರಣದಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

VNR GOLD

ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷರಾದ ಚಿತ್ರಾ. ಜೆ. ಯಡಪಡಿತ್ತಾಯ ಉದ್ಘಾಟಿಸಿ ಮಾತನಾಡಿ  ರಕ್ತದಾನ ಅಮೂಲ್ಯವಾದ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿ ನೀಡುವ ರಕ್ತವು ಅಗತ್ಯವಿರುವ ಹಲವಾರು ಜೀವಗಳನ್ನು ಉಳಿಸಲು ಸಹಕಾರಿಯಾಗುತ್ತದೆ. ಯುವಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಬೇಕು ಎಂದರು.

D.SHIVA BHAT JWELLERS

ಅಧ್ಯಕ್ಷತೆ ವಹಿಸಿದ್ದ ಪ್ರಿನ್ಸಿಪಾಲ್ ನರಸಿಂಹ ಭಟ್ ಎಚ್,  ರಕ್ತದಾನ ಅತ್ಯಂತ ಮಹತ್ವದ ಸೇವೆಯಾಗಿದ್ದು,  ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಹಾಗೂ ಇಂಥ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಜಾಹೀರಾತು

ಲಯನ್ಸ್ ಕ್ಲಬ್ ಬಂಟ್ವಾಳ ಸೇವಾ ಸಂಯೋಜಕ ಉಮೇಶ್ ಆಚಾರ್ಯ , ಖಜಾಂಚಿ ಸುಮಾ ಸುನಿಲ್ , ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವೈದ್ಯಾಧಿಕಾರಿಗಳಾದ ಡಾ. ವಿಧುಶ್ರೀ , ಡಾ . ತರುಣ್ , ಸಂಸ್ಥೆಯ ವಿದಾರ್ಥಿ ಕ್ಷೇಮಾಧಿಕಾರಿಗಳಾದ  ಭಗವಾನ್ ಪ್ರಸಾದ್ , ಕಚೇರಿ ಅಧೀಕ್ಷಕ ಸುಧಾಕರ್ ಸಿ.ಎಸ್,  ಸಿವಿಲ್ ವಿಭಾಗ ಮುಖ್ಯಸ್ಥರಾದ ಮೋಹನ್ ರಾಜ್ ಜಿ.ಎಸ್,  ಎನ್ನೆಸ್ಸೆಸ್ ಮತ್ತು ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಯಾದ ಭಾಸ್ಕರ್ ಎಲ್ ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ರಕ್ತದಾನ ಮಾಡಿದರು. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ವಿವಿಧ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಗಳನ್ನು ನೀಡಲಾಯಿತು.

ಕೆಎಂಸಿ  ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಲಯನ್ಸ್ ಕ್ಲಬ್ ಬಂಟ್ವಾಳ, ಸಂಸ್ಥೆಯ ಎನ್ನೆಸ್ಸೆಸ್  ಸ್ವಯಂಸೇವಕರು, ಭಾರತೀಯ ಯುವ ರೆಡ್‌ಕ್ರಾಸ್ ಘಟಕ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಹಕರಿಸಿದರು.  ಉಪನ್ಯಾಸಕ ರಿತೇಶ್ ವಿ.ಎ ನಿರೂಪಿಸಿದರು.   ಭಾಸ್ಕರ ಎಲ್ ಸ್ವಾಗತಿಸಿ,  ಅಶ್ವಿನಿ ರೈ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*