ಬಂಟ್ವಾಳ: ಆರೋಗ್ಯವಂತ ಸಮಾಜ ಸೃಷ್ಟಿಗೆ ಆಹಾರ ಜಾಗೃತಿಯೂ ಬೇಕ ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ ಸಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಅನಿಲ್ ಪ್ರಕಾಶ್ ಹೇಳಿದ್ದಾರೆ.
ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕಾಂಶ ದಿನ ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ದೈನಂದಿನ ಜೀವನದಲ್ಲಿ ವ್ಯಾಯಾಮದ ಕೊರತೆ, ಉಪವಾಸ, ಆಹಾರದ ಗುಣಮಟ್ಟ, ಅಸುರಕ್ಷಿತ ಆಹಾರ ಇವೆಲ್ಲದರ ಕುರಿತು ಜಾಗ್ರತಿ ವಹಿಸಬೇಕು ಎಂದವರು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಆಹಾರ ದ ಸುರಕ್ಷತೆ ಕುರಿತು ಮಾಹಿತಿ ನೀಡಿದರು.ವಕೀಲರ ಸಂಘದ ಜತೆಕಾರ್ಯದರ್ಶಿ ಅಕ್ಷತಾ ಶೆಟ್ಟಿ ಶುಭ ಹಾರೈಸಿದರು.
ನ್ಯಾಯವಾದಿ ಆಶಾಮಣಿ ಡಿ ರೈ ಪೌಷ್ಟಿಕ ಆಹಾರದ ಸುರಕ್ಷತೆ ಮತ್ತು ಪೋಷಣೆ ಹಾಗೂ ಕಾನೂನಾತ್ಮಕ ಹಕ್ಕುಗಳ ಕುರಿತು ಮಾಹಿತಿ ನೀಡಿದರು.ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ನೂರಾ. ಬಿ. ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಒದಗಿಸಬೇಕಾದ ಆಹಾರ ಕುರಿತು ಮಾಹಿತಿ ನೀಡಿದರು
ನಗರ ಪೊಲೀಸ್ ಠಾಣೆ ಎಸ್.ಐ. ದುರ್ಗಪ್ಪ ಮಾತನಾಡಿ, ಮಾದಕ ವ್ಯಸನ ಮುಕ್ತ ಪರಿಸರ ನಿರ್ಮಾಣಕ್ಕೆ ಶ್ರಮಿಸುವ ಕುರಿತು ವಿವರಿಸಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಮೇಲ್ವಿಚಾರಕಿ ಮುಬೀನಾ ಬಾನು ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಯಶೋಧ ದೈವಸ್ಥಳ ವಂದಿಸಿದರು.