ಕಲ್ಲಡ್ಕ

ಮಾಣಿ ಯುವಕ ಮಂಡಲ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

ಶ್ರೀ ಕೃಷ್ಣನ ಆದರ್ಶವನ್ನು ಪಾಲಿಸಿದಾಗ ನಾವು ಆಚರಿಸುವ ಮೊಸರು ಕುಡಿಕೆ ಉತ್ಸವ ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈಯವರು ಹೇಳಿದರು.

VNR GOLD

ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾಣಿ ಗಾಂಧಿ ಮೈದಾನದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಯಾವುದೇ ಧಾರ್ಮಿಕ ಆಚರಣೆಗಳನ್ನು ಜಾತಿ ಧರ್ಮ ಭಾಷೆಗಳ ವ್ಯತ್ಯಾಸವಿಲ್ಲದೆ ಆಚರಿಸಿದಾಗ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಾಣಿ ಯುವಕ ಮಂಡಲ ಕಳೆದ ಹಲವಾರು ವರ್ಷಗಳಿಂದ ಆಚರಿಸುತ್ತಿರುವ ಮೊಸರು ಕುಡಿಕೆ ಉತ್ಸವ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.      ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿದರು.

D.SHIVA BHAT JWELLERS

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಬಂಟ್ವಾಳ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಸದಸ್ಯ ಬೇಬಿ ಕುಂದರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸುರೇಶ್ ಕುಲಾಲ್ ನಾವೂರು ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾಹೀರಾತು

ಪೆರಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕುಶಲ.ಯಂ.ಪೆರಾಜೆ, ನೇರಳಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು, ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಇಬ್ರಾಹಿಂ.ಕೆ.ಮಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಮಾಣಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಮತ್ತು ಮಾಣಿ ಕರ್ನಾಟಕ ಪ್ರೌಢ ಶಾಲೆಯ  ನಿವೃತ್ತ ಜವಾನ ತಿಮ್ಮಪ್ಪ. ಕೆ ಇವರನ್ನು ಸನ್ಮಾನಿಸಲಾಯಿತು. ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸಂಕೀರ್ತಣೆ ನಡೆಯಿತು.  ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಬೇರೆ ವಿಭಾಗಗಳಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸಂಗಮ್ ಬ್ರದರ್ಸ್ ಪುತ್ತೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಣಿ ಯುವಕ ಮಂಡಲದ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಸಾಗು, ಉಪಾಧ್ಯಕ್ಷ ಮೆಲ್ವಿನ್ ಕಿಶೋರ್ ಮಾರ್ಟಿಸ್, ಕಾರ್ಯದರ್ಶಿ ಅಬ್ದುಲ್ ಅಝೀಝ್, ಕೋಶಾಧಿಕಾರಿ ನಾಗರಾಜ್ ಪೂಜಾರಿ ಕೋಡಿ, ಕ್ರೀಡಾ ಕಾರ್ಯದರ್ಶಿ ಜಯರಾಮ ಪೂಜಾರಿ, ಸಂಘಟನಾ ಕಾರ್ಯದರ್ಶಿ ರಾಜೇಶ್ ಪೂಜಾರಿ, ಜೊತೆ ಕಾರ್ಯದರ್ಶಿ ಅಕ್ಷಿತ್ ಪೂಜಾರಿ, ಪ್ರಮುಖರಾದ ಮೂಸಾ ಕರೀಂ ಮಾಣಿ, ವಿಕೇಶ್ ಶೆಟ್ಟಿ ಕೊಡಾಜೆ, ಮಹಮ್ಮದ್ ಹಬೀಬ್, ದಯಾನಂದ ಪೂಜಾರಿ, ಗಿರೀಶ್ ಪೂಜಾರಿ, ಹರೀಶ್ ಮಾಣಿ, ಅಬ್ದುಲ್ ಮಜೀದ್, ಪ್ರಕಾಶ್ ಮಾಣಿ, ಬೇಬಿ ಸುವರ್ಣ, ಮಹಮ್ಮದ್ ಅಶ್ರಫ್, ಧನುಶ್ ಶೆಟ್ಟಿ, ರಕ್ಷನ್ ಕಾಪಿಕಾಡು ಮತ್ತಿತರರು ಉಪಸ್ಥಿತರಿದ್ದರು.

ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಯುವಕ ಮಂಡಲದ ಸಂಚಾಲಕ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.