
ಬಂಟ್ವಾಳ ತಾಲೂಕಿನ ತುಂಬೆಯ ಭಾಗ್ಯೋದಯ ಮಿತ್ರ ಕಲಾ ವೃಂದ (ರಿ)ಇದರ ನವೀಕೃತ ಕಟ್ಟಡ “ಭಾಗ್ಯೋದಯ”ದ ಉದ್ಘಾಟನಾ ಸಮಾರಂಭ ಹನುಮ ನಗರ ತುಂಬೆಯಲ್ಲಿ ನಡೆಯಿತು.
ಅರ್ಕುಳ ಮನಸ್ವಿನಿ ಆಸ್ಪತ್ರೆಯ ಡಾ ರವೀಶ್ ತುಂಗ ಮಾತನಾಡಿ, , ಸಾಧನೆಗೆ ಪರಿಶ್ರಮದೊಂದಿಗೆ ದೇವರ ಅನುಗ್ರಹ ಅಗತ್ಯ ಎಂದರು.

ಕಟ್ಟಡ ಉದ್ಘಾಟಿಸಿದ ಎಂ ಪಿ ಫ್ಯಾಮಿಲಿ ಶಾಪ್ ಮಂಗಳೂರು ಮಾಲಕ ದಿನೇಶ್ ಎಂ ಪಿ ಮಾತನಾಡಿ ಸತ್ಕಾರ್ಯಗಳು ಈ ಸಂಘದ ಕಟ್ಟಡದಲ್ಲಿ ನಿರಂತರ ನಡೆಯಲಿ ಎಂದು ಶುಭ ಹಾರೈಸಿದರು.
ಸಂಸ್ಕಾರ ಭಾರತೀ ಜಿಲ್ಲಾಧ್ಯಕ್ಷ ಟಿ ತಾರಾನಾಥ ಕೊಟ್ಟಾರಿ ಮಾತನಾಡಿ, ಸಂಘಟನೆಯೊಂದು ಸಮಾಜಮುಖಿಯಾಗಿ ತೊಡಗಿಸಿಕೊಂಡರೆ ಗ್ರಾಮದ ಅಭ್ಯೋದಯಕ್ಕೆ ಕಾರಣವಾಗುತ್ತದೆ ಎಂದರು.

ಭಾಗ್ಯೋದಯ ಮಿತ್ರ ಕಲಾ ವೃಂದದ ಅಧ್ಯಕ್ಷ ಯೋಗೀಶ್ ಕಜೆಕಂಡ ಪ್ರಾಸ್ತವಿಕವಾಗಿದರು.
ಈ ಸಂದರ್ಭದಲ್ಲಿ ನಿವೃತ್ತ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಹಾಗೂ ಸ್ಥಾಪಕ ಸದಸ್ಯ ವೆಂಕಪ್ಪ ಕುಲಾಲ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಾದ ದೀಪ್ತಿ ಪರನೀರು, ತನ್ವಿ ಪರನೀರು ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು, ನೂತನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಪ್ರಮುಖರಾದ ಹಿರಿಯ ಸದಸ್ಯ ಲಿಂಗಪ್ಪ ಕುಲಾಲ್,ಪ್ರ.ಕಾರ್ಯದರ್ಶಿ ರಾಜೇಶ್ ಪರ್ಲಕ್ಕೆ, ಕೋಶಾಧಿಕಾರಿ ಚರಣ್, ಜೊತೆ ಕಾರ್ಯದರ್ಶಿ ಧನ್ಯ ಗೋಪಾಲ್,ಕ್ರೀಡಾ ಕಾರ್ಯದರ್ಶಿ ಅನಿಶ್ ಪರ್ಲಕ್ಕೆ ಉಪಸ್ಥಿತರಿದ್ದರು.


Be the first to comment on "ತುಂಬೆ: ಭಾಗ್ಯೋದಯ ಮಿತ್ರ ಕಲಾ ವೃಂದದ ನವೀಕೃತ ಕಟ್ಟಡ ಉದ್ಘಾಟನೆ."