ಬಂಟ್ವಾಳ

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ  ಮುಖವಾಡ ತಯಾರಿ, ಮುಖವರ್ಣಿಕಾ ಕಾರ್ಯಾಗಾರ

VNR GOLD

ಇಂಟಾಕ್ ಮಂಗಳೂರು ಅಧ್ಯಾಯ, ಎಚ್.ಇ.ಸಿ.ಎಸ್, ಇಂಟಾಕ್ ಮತ್ತು ಮಂಚಿ ಕೊಳ್ನಾಡು ಪ್ರೌಢಶಾಲೆಯ ಇಂಟಾಕ್ ಹೆರಿಟೇಜ್ ಕ್ಲಬ್, ಸಹಯೋಗದೊಂದಿಗೆ ಮಂಚಿ  ಕೊಳ್ನಾಡು ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಮುಖವಾಡ ತಯಾರಿ ಮತ್ತು ಮುಖವರ್ಣಿಕೆಯ ಬಗ್ಗೆ ಕಾರ್ಯಕ್ರಮವನ್ನು ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಅತಿಥಿಗಳಾಗಿ ಆಗಮಿಸಿದ ಇಂಟಾಕ್ ಮಂಗಳೂರು ಅಧ್ಯಾಯದ ಸಂಚಾಲಕರು ಸುಭಾಷ್ ಚಂದ್ರ ಬಸು ಮಾತನಾಡಿ, ನಮ್ಮ ನಾಡಿನ ಸಾಂಪ್ರದಾಯಿಕ ಕಲೆ ಪರಂಪರೆಗಳನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಈ ಬಗ್ಗೆ ಆಸಕ್ತಿ ತಳೆದರೆ ಇತಿಹಾಸ ಉಳಿಸುವ ಪ್ರಯತ್ನವಾಗುತ್ತದೆ ಎಂದರು.

ಇಂಟಾಕ್ ಮಂಗಳೂರು ಅಧ್ಯಾಯದ ಸದಸ್ಯರು ಹಾಗೂ ಚಿತ್ರ ಕಲಾವಿದರಾದ ರಾಜೇಂದ್ರ ಕೇದಿಗೆ ಮಾತನಾಡಿ, ಮುಖವಾಡ ತಯಾರಿ ಮತ್ತು  ಮುಖವರ್ಣಿಕೆಯ ಕಲೆ ವಿದ್ಯಾರ್ಥಿಗಳಲ್ಲಿ ಕಲಾ ಕೌಶಲ್ಯ ಬೆಳೆಸುವುದಲ್ಲದೆ ಸೃಜನಶೀಲ ವ್ಯಕ್ತಿತ್ವವನ್ನು ಮೈಗೂಡಿಸುತ್ತದೆ. ಕಲೆಯ ಸೊಗಡನ್ನು ಮೈಗೂಡಿಸಿಕೊಂಡು ಬೆಳೆಯುವಂತಾದರೆ ಕಲಾಪ್ರಜ್ಞೆ ನಮ್ಮದಾಗುತ್ತದೆ ಎಂದರು.

ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ವಿದ್ಯಾರ್ಥಿಗಳಿಗೆ ಮುಖವಾಡ ತಯಾರಿಯ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು. ಪ್ಲಾಸ್ಟರ್ ಆಫ್ ಪ್ಯಾರಿಸ್ ಬಟ್ಟೆಯ ಮೂಲಕ ಮುಖದ ಅಚ್ಚನ್ನು ತೆಗೆಯುವ ವಿಧಾನ ಕುರಿತು ತರಬೇತಿ ನೀಡಿದರು. ಕಾರ್ಯಗಾರದಲ್ಲಿ ಭಾಗವಹಿಸಿದ ವಿವಿಧ ಶಾಲೆಗಳ ಸುಮಾರು 60 ವಿದ್ಯಾರ್ಥಿಗಳು ಗುಂಪು ಚಟುವಟಿಕೆಯ ಮೂಲಕ ಮುಖವಾಡ ತಯಾರಿಸಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಕಲಾವಿದೆ ರೇಷ್ಮಾ ಶೆಟ್ಟಿ ಮುಖವರ್ಣಿಕೆಯ ಕುರಿತಾಗಿ ವಿದ್ಯಾರ್ಥಿಗಳಿಗೆ ನೈಸರ್ಗಿಕ ಬಣ್ಣಗಳನ್ನು ತಯಾರಿಸುವ ಹಾಗೂ ಬಳಸುವ ಕುರಿತಾಗಿ ಮಾಹಿತಿ ನೀಡಿದರು.

ಮಂಚಿ ಕೊಳ್ನಾಡು ಪ್ರೌಢಶಾಲೆ, ನೂಜಿಬೈಲು ಅನುದಾನಿತ ಶಾಲೆ, ಮೋಂತಿಮಾರು ಶಾಲೆ, ಇರಾ ಪ್ರಾಥಮಿಕ ಶಾಲೆ, ಪುದ್ದೊಟ್ಟು ಶಾಲೆ ಇಲ್ಲಿನ ಒಟ್ಟು 60 ವಿದ್ಯಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡರು. ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಇಂಟಾಕ್ ಮಂಗಳೂರು ಅಧ್ಯಾಯದ ಸದಸ್ಯರಾದ ಶರ್ವಾಣಿ ಭಟ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ, ಕೊಳ್ನಾಡು ಪ್ರೌಢಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು, ಮೋಂತಿಮಾರು ಶಾಲಾ ಶಿಕ್ಷಕಿ ಯಶೋಧ, ಪುದ್ದೊಟ್ಟು ಶಾಲಾ ಶಿಕ್ಷಕಿ ರೇಖಾ ಹಾಗೂ ಕೊಳ್ನಾಡು ಪ್ರೌಢಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಶಿಕ್ಷಕ ಜಗನ್ನಾಥ ಪುರುಷ ಸ್ವಾಗತಿಸಿ, ತಾರಾನಾಥ ಕೈರಂಗಳ ಕಾರ್ಯಕ್ರಮ ನಿರ್ವಹಿಸಿದರು, ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲ ವಿಟ್ಲ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.