ಬಂಟ್ವಾಳ

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ – 720 ಕೋಟಿ ರೂ ವ್ಯವಹಾರ, 2.19 ಕೋಟಿ ರೂ ಲಾಭ: ಪ್ರಭಾಕರ ಪ್ರಭು

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025-26ನೇ ಆರ್ಥಿಕ ವರ್ಷದಲ್ಲಿ 720 ಕೋಟಿ ರೂ ವ್ಯವಹಾರ ಮಾಡಿದ್ದು, 2.19 ಕೋಟಿ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.

ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ದಲ್ಲಿ ಕರೆದ ಪತ್ರಿಕಾ ಗೋಷ್ಠಿ ಯಲ್ಲಿ ವಿವರ ನೀಡಿದರು.

 ಸಂಘವು 1947ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ ಬಿ. ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು , ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟಾರೆ 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ.  2025-26 ನೇ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು ರೂ. 133.63 ಕೋಟಿ ಸಾಲ ವಿತರಿಸಲಾಗಿದ್ದು,ಹೊರ ಬಾಕಿ ಸಾಲವು ರೂ.133.63 ಕೋಟಿ ಆಗಿದ್ದು , ವಿತರಿಸಿದ ಸಾಲದಲ್ಲಿ ಶೇ 98 ವಸೂಲಾತಿಯಾಗಿದೆ. 2025-26 ನೇ ಸಾಲಿನ ವರ್ಷಾಂತ್ಯಕ್ಕೆ ರೂ. 69.56 ಕೋಟಿ ಠೇವಣಿ ಹೊಂದಿದ್ದು , ಅಡಿಟ್ ವರದಿಯಲ್ಲಿ ಎ ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬರಲಾಗಿದೆ ಎಂದರು.

ಜಾಹೀರಾತು

 ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ ಮಾಡಿರುವ ಸಂಘ, ತನ್ನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದಲ್ಲದೆ,. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುತ್ತಿದೆ. ಸದಸ್ಯರಿಗಾಗಿ ರೈತ ಕಲ್ಯಾಣ ನಿಧಿ ಯೋಜನೆ ಸ್ಥಾಪಿಸಿರುವ ಸಂಘದ ಆವರಣದಲ್ಲಿ ನ್ಯಾಯಬೆಲೆ ಅಂಗಡಿ ಇದೆ.

ಆರಂಬೋಡಿ, ರಾಯಿ, ಮಾವಿನಕಟ್ಟೆ,ಅರಳ ಎಂಬಲ್ಲಿ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿದ್ದು , ಸಿ ಸಿ ಕ್ಯಾಮೆರ ಹಾಗೂ ಸೈರನ್ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಘದ ಮಹಾಸಭೆ:

ಸೆ.19ರಂದು ಶನಿವಾರ ಬೆಳಿಗ್ಗೆ 10ಕ್ಕೆ ಸಂಘದ ಕೇಂದ್ರ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಮಹಾಸಭೆ ನಡೆಯಲಿದೆ ಎಂದರು.

ಪಂಚ ಪರಿವರ್ತನೆ ಕಲ್ಪನೆಯಡಿಯಲ್ಲಿ ಸದಸ್ಯರಿಗೆ ಗಿಡ ವಿತರಣೆ

ದೇಶದಲ್ಲಿ ಪಂಚ ಪರಿವರ್ತನೆಗಳು ಜಾರಿಯಾಗುವ ನಿಟ್ಟಿನಲ್ಲಿ ಅದರ ಒಂದು ಭಾಗವಾದ ಪರಿಸರ ಸಂರಕ್ಷಣೆಯ  ದ್ರಷ್ಟಿಯಲ್ಲಿ ಸ್ವಚ್ಛ ಗಾಳಿಯ ಅವಶ್ಯಕತೆಗಾಗಿ ಪ್ರತಿಯೊಬ್ಬ ಸದಸ್ಯರಿಗೆ ಮಹಾಸಭೆ ದಿನದಂದು ಒಂದೊಂದು ಗಿಡವನ್ನು ನೀಡುವುದರ ಮೂಲಕ ಕಾಡು ಬೆಳೆಸಿ ನಾಡು ಉಳಿಸಿ ಅಭಿಯಾನಕ್ಕೆ ಉತ್ತೇಜನ ನೀಡಲಾಗಿದೆ ಎಂದು ಪ್ರಭು ಹೇಳಿದರು.

ಉಪಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ , ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್ , ಎ ಶಿವ ಗೌಡ , ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ಕೀರ್ತಿರಾಜ್, ವೃತ್ತಿಪರ ನಿರ್ದೇಶಕ ರಾಜೇಶ್ ಶೆಟ್ಟಿ ಕೆ ,  ನವೀನ್ ಹೆಗ್ಡೆ ,ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ , ಸಹಾಯಕ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು.

VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಮಹತ್ವದ ನಿರ್ಧಾರ ಕೈಗೊಳ್ಳಲಿ

Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…

18 hours ago