ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಗಣೇಶ ಮೂರ್ತಿಯ ಶೋಭಾಯಾತ್ರೆ ಗುರುವಾರ ಸಂಜೆ ಅದ್ದೂರಿಯಲ್ಲಿ ನಡೆಯಿತು.
ಸಂಜೆ 4.30ಕ್ಕೆ ವಿಸರ್ಜನಾ ಪೂಜೆ ನೆರವೇರಿದ ಬಳಿಕ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು, ವಿವಿಧ ವೇಷಧಾರಿಗಳು, ಕುಣಿತ ಭಜನಾ ತಂಡಗಳು ಹಾಗೂ ಬ್ಯಾಂಡ್ ವಾದ್ಯಗಳ ತಂಡಗಳು ಪಾಲ್ಗೊಂಡು ಮೆರುಗು ನೀಡಿದವು. ಹುಲಿವೇಷಗಳು ಗಮನ ಸೆಳೆದವು. ಆರ್‌ಎಸ್‌ಎಸ್ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಶ್ರೀ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ ಸಹಿತ ಸಮಿತಿ ಸದಸ್ಯರು, ಊರಿನ ಪ್ರಮುಖರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.