ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳು ನಡೆದವು.

ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯ ಬಿಜೆಪಿ ಪ್ರಮುಖರಾದ ವಿಕಾಸ್ ಪುತ್ತೂರು, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ ಬಜ, ಪಕ್ಷದ ಪ್ರಮುಖರಾದ ಗೋಪಾಲ ಸುವರ್ಣ, ದಿನೇಶ್ ಭಂಡಾರಿ,ಜನಾರ್ದನ ಬೊಂಡಾಲ,ಹರಿಪ್ರಸಾಧ್, ಮೋಹನ್ ಪಿಎಸ್. ಸಂತೋಷ್ ನರಿಕೊಂಬು, ಭಾಸ್ಕರ ಟೈಲರ್, ಸದಾನಂದ ನಾವೂರ, ಕಾರ್ತಿಕ್ ಬಲ್ಲಾಳ್, ಸುರೇಶ್ ಕೋಟ್ಯಾನ್, ಪ್ರಣಾಮ್ ರಾಜ್ ಅಜ್ಜಿಬೆಟ್ಟು,ಲಕ್ಷಣ್ ರಾಜ್ ಪಾಣೆಮಂಗಳೂರು ,ರಜನಿ ಚಿಕ್ಕ್ಯಯಮಠ ಹಾಗೂ ಗಣೇಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.



Be the first to comment on "ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಿಶೇಷ ಪೂಜೆ"