ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಅರ್ಪಿಸುವ ಕರ್ನಾಟಕದ ಪ್ರಪ್ರಥಮ ಭರತನಾಟ್ಯ ರಿಯಾಲಿಟಿ ಶೋ Daijiworld “ನಟನಂ” ಇದರ Grand Finale ಕಾರ್ಯಕ್ರಮ 20/09/2026 ಭಾನುವಾರ ಮಧ್ಯಾಹ್ನ 2 ಗಂಟೆಗೆ Don Bosco Hall ಮಂಗಳೂರು ಇಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ವಿದುಷಿ ಶ್ರೀಮತಿ ಶುಭ ಧನಂಜಯ, ದಾಯ್ಜಿವರ್ಲ್ಡ್ ವಾಹಿನಿಯ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ, ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ದ ನೃತ್ಯ ಗುರು ವಿದುಷಿ ರೋಹಿಣಿ ಉದಯ್ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಕಲಾಭಿಮಾನಿಗಳು ಭಾಗವಹಿಸುವಂತೆ ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ದ ಸಂಚಾಲಕರಾದ ಉದಯ ವೆಂಕಟೇಶ್ ಭಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.