ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ತುಳು: ಸಚಿವ ಸಂಪುಟ ಸಭೆ ಬಳಿಕ ಸಿಎಂ ಡಿಕೆಶಿ ಘೋಷಣೆ — ವಿವರಗಳು ಇಲ್ಲಿವೆ

ಮಂಗಳೂರು: ತುಳು ಭಾಷೆ ವಿಚಾರದಲ್ಲಿ ಉಡುಪಿ ಮತ್ತು ದಕ್ಣಿಣ ಕನ್ನಡ ಜಿಲ್ಲೆ ವಿಚಾರವಾಗಿ ಅನ್ವಯವಾಗುವಂತೆ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿಸಲು ತೀರ್ಮಾನಿಸಿದ್ದೇವೆಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.


ಮಂಗಳೂರು ಪ್ರಜಾಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ದಕ್ಣಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯಾಗಿದಲು ಕರಡು ಪ್ರತಿ ಸಿದ್ಧಮಾಡಿ, ಸಾರ್ವಜನಿಕ ಅಭಿಪ್ರಾಯ ರೂಪಿಸಲು ಒಂದು ತಿಂಗಳ ಸಮಯಾವಕಾಶ ನೀಡುವುದಾಗಿ ತಿಳಿಸಿದರು.
ಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಯಾರು ಹೂಡಿಕೆ ಮಾಡುತ್ತಾರೆ, ಅವರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗುವುದು. ಅವರ ಆರ್ಥಿಕ ಸ್ಥಿತಿಗೆ ಸಮಸ್ಯೆಯಾಗದಂತೆ ಹೂಡಿಕೆ ಆರ್ಥಿಕ ನೀತಿ, ನಗರಾಭಿವೃದ್ಧಿ ಯೋಜನೆ ರೂಪಿಸಲಾಗುವುದು. ಮೀನುಗಾರಿಕೆಗೆ ಸಂಬಂಧಿಸಿ ವಿವಿ ಸ್ಥಾಪಿಸಲಾಗುವುದು ಎಂದರು.
ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುದಾನ ನೀಡುವ ಕುರಿತು ಪ್ರಸ್ತಾಪಿಸಿದರು.
ಎಂಎಲ್ಎ ಆದ ಕೂಡಲೇ ಅಶೋಕ್ ರೈ‌ ಅವರು ತುಳು ಭಾಷೆಗೆ ಸ್ಥಾನಮಾನ ನೀಡುವ ಕುರಿತು ಪ್ರಸ್ತಾಪಿಸಿದ್ದು, ಆಗ ಸ್ಪೀಕರ್ ಆಗಿದ್ದ ಖಾದರ್ ಅವರೂ ಒತ್ತಡ ಹಾಕಿದ್ದರು ಎಂದರು.
ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ರಾಜಕಾರಣ ಬದಿಗಿಟ್ಟು ಜನರಿಗೆ ಸಾಮಾಜಿಕ ನ್ಯಾಯ ನೀಡಲು ಬದ್ಧ ಎಂದರು.
ಮುಂದಿನ ದಿನಗಳಲ್ಲಿ ಕರಾವಳಿಯ ಕಾರವಾರ ಮತ್ತು ಉಡುಪಿಯಲ್ಲಿ ಸಂಪುಟ ಸಭೆ ನಡೆಸಲಿದ್ದೇವೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕವಾಗಿ ಆರ್ಥಿಕವಾಗಿ ಬೆಳೆದ ಜಿಲ್ಲೆಯಾಗಿದೆ. ನಾನು ಸಿಎಂ ಆದ ಬಳಿಕ ಮಂಗಳೂರಿನಲ್ಲಿ ಸಭೆ ನಡೆಸುತ್ತಿದ್ದೇನೆ. ಅನೇಕ ಬಾರಿ ಮಂಗಳೂರು ಕುರಿತು ಶಾಸಕರಿಗೆ ತಿಳಿಸಿದ್ದೆ. ಮಂಗಳೂರಿನಲ್ಲಿ ನಡೆದ ಇಂದಿನ ಸಭೆ, ಬೆಂಗಳೂರಿನಲ್ಲಿ ನಡೆದ ಸಭೆಗಳ ಸಹಿತ ಕಳೆದ ಮೂರು ದಿನಗಳಿಂದೀಚೆಗೆ ವಾಣಿಜ್ಯ ಸಂಘ, ಮೀನುಗಾರರ ಸಹಿತ ಹಲವರು ಸಲಹೆ, ಸೂಚನೆ ನೀಡಿದ್ದಾರೆ. ಆರ್ಥಿಕ ಸ್ಥಿತಿ ಸಹಿತ ಹಲವು ವಿಚಾರಕ್ಕೆ ಸಂಬಂಂಧಿಸಿ ಕೆಲವು ಸಲಹೆಗಳನ್ನು ನೀಡಿದ್ಸನ್ನು ಸ್ವೀಕರಿಸಲಾಗಿದೆ ಎಂದರು.
ಭಾವನಾತ್ಮಕ ವಿಚಾರಗಳ ಕುರಿತು ಮಾಧ್ಯಮಗಳ ವರದಿಗಳ ಕುರಿತು ಗಮನ ಹರಸಿದ್ದೇವೆ ಎಂದರು.

ಜಾಹೀರಾತು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ತುಳು: ಸಚಿವ ಸಂಪುಟ ಸಭೆ ಬಳಿಕ ಸಿಎಂ ಡಿಕೆಶಿ ಘೋಷಣೆ — ವಿವರಗಳು ಇಲ್ಲಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*