ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ರಮ್ಯಾ ಸೋಮಯಾಜಿ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ರವಿಚಂದ್ರ ಬಂಟ್ವಾಳ, ಕಾರ್ಯದರ್ಶಿ ರವಿರಾಜ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಆನ್ಸ್ ಅಧ್ಯಕ್ಷೆ ಗೌರಿ ಎಂ.ಶೆಣೈ, ನೀರಜಾ ಸಿ.ಗಾಂಭೀರ್, ಭಾರತಿ ಕುಂದರ್, ಕೆನರಾ ಪಿಯು ಕಾಲೇಜು ಡೀನ್ ಗೋಪಾಲಕೃಷ್ಣ ಶೆಟ್ಟಿ, ಐತಪ್ಪ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.