ಪ್ರಮುಖ ಸುದ್ದಿಗಳು

ಮಂಗಳೂರಿನಲ್ಲಿ ಸಂಪುಟ ಸಭೆ: ಜಿಲ್ಲೆಯ ರೈತರ ಭೇಟಿಯಾಗದ ಸಿಎಂ ನಡೆಗೆ ರೈತ ಸಂಘಟನೆ ಬೇಸರ

ಬಂಟ್ವಾಳ: ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಅನ್ನದಾತರಾದ ರೈತರನ್ನು ಭೇಟಿಯಾಗದೇ ನಿರ್ಲಕ್ಷಿಸಿರುವುದಕ್ಕೆ ರೈತ ಮುಖಂಡರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬೈಲುಗುತ್ತು ಶ್ರೀಧರ್ ಶೆಟ್ಟಿ, ರಾಜ್ಯ ಕಾರ್ಯದರ್ಶಿ ನಡಿಕಂಬಳಗುತ್ತು ಮನೋಹರ್ ಶೆಟ್ಟಿ,  ಬಂಟ್ವಾಳ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿಗಳಾದ ಎಂ.ಕೆ. ಇದಿನಬ್ಬ ಹಾಗೂ ಸುದೇಶ್ ಮಯ್ಯ,  ಜಿಲ್ಲಾ ಸಂಚಾಲಕರಾದ ದಯಾನಂದ ಶೆಟ್ಟಿ ಕುಳವೂರುಗುತ್ತು ಹಾಗೂ ಹರಿಶ್ಚಂದ್ರ ಕೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ತುಳು ಭಾಷೆಯನ್ನು ರಾಜ್ಯದ ಆಡಳಿತ ಭಾಷೆಯನ್ನಾಗಿ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ಧಾರವನ್ನು ಮತ್ತು ಸಭೆಯಲ್ಲಿ ಕೈಗೊಂಡ ಜನಪರ ತೀರ್ಮಾನಗಳನ್ನು ಕರಾವಳಿಯ ಮುಖಂಡರು ಮುಕ್ತಕಂಠದಿಂದ ಅಭಿನಂದಿಸಿದ್ದಾರೆ. ಸಭೆಯ ಸಂದರ್ಭದಲ್ಲಿ ಶ್ರಮಜೀವಿ ಮೀನುಗಾರರನ್ನು ಖುದ್ದಾಗಿ ಭೇಟಿಯಾಗಿ ಅವರ ಕುಂದುಕೊರತೆ ಆಲಿಸಿದ ಮುಖ್ಯಮಂತ್ರಿಗಳ ನಡೆ ಶ್ಲಾಘನೀಯ ಎಂದು ಹೇಳಿರುವ ರೈತ ಮುಖಂಡರು, ಇದೇ ವೇಳೆ ಜಿಲ್ಲೆಯಲ್ಲಿ ರೈತ ವಿರೋಧಿ ಮನಸ್ಥಿತಿಯ ಅಧಿಕಾರಿಗಳು ಹೆಚ್ಚಾಗಿದ್ದು, ‘ರೈತ ಸಂಪರ್ಕ’ ಸಂಪೂರ್ಣವಾಗಿ ಮೂಲೆಗುಂಪಾಗಿದೆ. ಪ್ರಸ್ತುತ ಅಡಕೆ ಹಾಗೂ ಭತ್ತ ಬೆಳೆಗಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಅವರ ಅಳಲನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಾಗಲಿ, ಕೃಷಿ, ತೋಟಗಾರಿಕೆ ಅಥವಾ ಕಂದಾಯ ಸಚಿವರಾಗಲಿ ಜಿಲ್ಲೆಗೆ ಭೇಟಿ ನೀಡಿದಾಗ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಡ್ಡಾಯವಾಗಿ ರೈತ ಸಂಪರ್ಕ ಸಭೆ ಆಯೋಜಿಸಬೇಕು ಹಾಗೂ ರೈತರ ಹತ್ತು ಹಲವು ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಬೇಕು ಎಂದು ವಿನಂತಿಸಿದ್ದಾರೆ.

VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.