ಬಂಟ್ವಾಳ: ಉಡುಪಿ ಜಿಲ್ಲೆ ಕೋಟದ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಜನ್ಮಭೂಮಿ ಟ್ರಸ್ಟ್ ಸಹಯೋಗದಲ್ಲಿ ನೀಡಲಾಗುವ 2026ನೇ ಸಾಲಿನ ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಕೊಯಿಲದ ದೈಹಿಕ ಶಿಕ್ಷಣ ಶಿಕ್ಷಕರಾದ ಜನಾರ್ದನ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 26 ರಂದು ಸಂಜೆ 4 ಗಂಟೆಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜನಾರ್ದನ ಅವರಿಗೆ ಈ ಗೌರವಾನ್ವಿತ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಗುವುದು.