ಮೊಡಂಕಾಪುವಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ : ಬಂಟ್ವಾಳ ವಲಯ ಮಟ್ಟದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಮೊಡಂಕಾಪುವಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಬಾಲಕಬಾಲಕಿಯರ ಬಂಟ್ವಾಳ ವಲಯ ಮಟ್ಟದ ಕ್ರೀಡಾಕೂಟವು ಸೆಪ್ಟೆಂಬರ್ 21 ಮತ್ತು 22ರಂದು ಇನ್ಫೆಂಟ್ ಜೀಸಸ್ ಶಾಲಾ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಅತೀ ವಂದನೀಯ ಫಾದರ್ ವಿಕ್ಟರ್ ಡಿಸೋಜಾರವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ರೈಯವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧಾತ್ಮಕ ಮನೋಭಾವ ಹಾಗೂ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಳ್ಳುವಂತೆ ಹುರಿದುಂಬಿಸಿದರು.

ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ. ಅವರು ಕಾರ್ಯಕ್ರಮಕ್ಕೆ ಆಗಮಿಸಿ ಶುಭನುಡಿಗಳನ್ನಾಡಿದರು.

ಜಾಹೀರಾತು

ವೇದಿಕೆಯಲ್ಲಿ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಫಾದರ್ ಮೆಲ್ವಿನ್ ಲೋಬೊ, ಚರ್ಚ್ ಸಹಾಯಕ ಧರ್ಮಗುರು ವಂ| ಫಾದರ್ ಪ್ರಮೋದ್ ಕ್ರಾಸ್ತಾ, ನಿಕಟಪೂರ್ವ ದೈಹಿಕ ಶಿಕ್ಷಕ ಶ್ರೀ ಶಿವಪ್ರಸಾದ್ ರೈ, ಶಿಕ್ಷಣ ಸಂಯೋಜಕಿ ಶ್ರೀಮತಿ ಪ್ರತಿಮಾ, ಬಂಟ್ವಾಳ ನೋಡಲ್ ಅಧಿಕಾರಿಗಳಾದ ಶ್ರೀ ಜಯಂತ್ ಹಾಗೂ ಶ್ರೀ ಚಂದ್ರಹಾಸ ಶೆಟ್ಟಿ, ದೈಹಿಕ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್, ಶಿಕ್ಷಣ ಸಂಯೋಜಕ ಶ್ರೀ ರಮಾನಂದ, ಪೊಳಲಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಸುಬ್ರಹ್ಮಣ್ಯ ಪೈ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಶ್ರೀ ಜೋನ್ ಗೋಮ್ಸ್, ಇನ್ಫೆಂಟ್ ಜೀಸಸ್ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ತೆರೇಸಾ ಡಿಮೆಲ್ಲೊ ಹಾಗೂ ದೀಪಿಕಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಸಾಧು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಇನ್ಫೆಂಟ್ ಜೀಸಸ್ ಶಾಲೆಯ ಸಹಶಿಕ್ಷಕರಾದ ಶ್ರೀ ಕಿಶೋರ್ ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಶ್ರೀಮತಿ ಉಷಾ ಧನ್ಯವಾದ ಸಮರ್ಪಿಸಿದರು

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೊಡಂಕಾಪುವಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ : ಬಂಟ್ವಾಳ ವಲಯ ಮಟ್ಟದ ಕ್ರೀಡಾಕೂಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*