ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಮೊಡಂಕಾಪುವಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷದೊಳಗಿನ ಬಾಲಕ–ಬಾಲಕಿಯರ ಬಂಟ್ವಾಳ ವಲಯ ಮಟ್ಟದ ಕ್ರೀಡಾಕೂಟವು ಸೆಪ್ಟೆಂಬರ್ 21 ಮತ್ತು 22ರಂದು ಇನ್ಫೆಂಟ್ ಜೀಸಸ್ ಶಾಲಾ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಅತೀ ವಂದನೀಯ ಫಾದರ್ ವಿಕ್ಟರ್ ಡಿಸೋಜಾರವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ರೈಯವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧಾತ್ಮಕ ಮನೋಭಾವ ಹಾಗೂ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಳ್ಳುವಂತೆ ಹುರಿದುಂಬಿಸಿದರು.
ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ. ಅವರು ಕಾರ್ಯಕ್ರಮಕ್ಕೆ ಆಗಮಿಸಿ ಶುಭನುಡಿಗಳನ್ನಾಡಿದರು.
ವೇದಿಕೆಯಲ್ಲಿ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಫಾದರ್ ಮೆಲ್ವಿನ್ ಲೋಬೊ, ಚರ್ಚ್ನ ಸಹಾಯಕ ಧರ್ಮಗುರು ವಂ| ಫಾದರ್ ಪ್ರಮೋದ್ ಕ್ರಾಸ್ತಾ, ನಿಕಟಪೂರ್ವ ದೈಹಿಕ ಶಿಕ್ಷಕ ಶ್ರೀ ಶಿವಪ್ರಸಾದ್ ರೈ, ಶಿಕ್ಷಣ ಸಂಯೋಜಕಿ ಶ್ರೀಮತಿ ಪ್ರತಿಮಾ, ಬಂಟ್ವಾಳ ನೋಡಲ್ ಅಧಿಕಾರಿಗಳಾದ ಶ್ರೀ ಜಯಂತ್ ಹಾಗೂ ಶ್ರೀ ಚಂದ್ರಹಾಸ ಶೆಟ್ಟಿ, ದೈಹಿಕ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್, ಶಿಕ್ಷಣ ಸಂಯೋಜಕ ಶ್ರೀ ರಮಾನಂದ, ಪೊಳಲಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಸುಬ್ರಹ್ಮಣ್ಯ ಪೈ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಶ್ರೀ ಜೋನ್ ಗೋಮ್ಸ್, ಇನ್ಫೆಂಟ್ ಜೀಸಸ್ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ತೆರೇಸಾ ಡಿಮೆಲ್ಲೊ ಹಾಗೂ ದೀಪಿಕಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಸಾಧು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇನ್ಫೆಂಟ್ ಜೀಸಸ್ ಶಾಲೆಯ ಸಹಶಿಕ್ಷಕರಾದ ಶ್ರೀ ಕಿಶೋರ್ ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಶ್ರೀಮತಿ ಉಷಾ ಧನ್ಯವಾದ ಸಮರ್ಪಿಸಿದರು
ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)
| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)