ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಲ್ಲಿನ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯ ೧೦ ನೇ ತರಗತಿಯ ವಿದ್ಯಾರ್ಥಿನಿ ತನ್ವಿ ಆರ್. ಸುವರ್ಣ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತನ್ವಿ ಅವರು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕಳೆದ ೨೦೨೪ ನೇ ಸಾಲಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲೂ ಪಾಲ್ಗೊಂಡು ಅತ್ಯುತ್ತಮ ಪ್ರದರ್ಶನ ನೀಡಿದ್ದರು.