ರಾಜ್ಯ ಸರ್ಕಾರದ ಸುತ್ತೋಲೆಯಂತೆ ಬಂಟ್ವಾಳ ತಾಲೂಕಿನಲ್ಲಿ ಸೆ.26ರ ಶನಿವಾರ ರಂದು ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಿ. ಮೂಡ ಗ್ರಾಮದ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕಿನ ಎಸ್.ಜಿ.ಎಸ್.ಆರ್. ನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಈ ಆಂದೋಲನ ನಡೆಯಲಿದೆ.
ಬಂಟವಾಳ ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ಯೋಜನೆ ಹಾಗೂ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ಪುರಸಭೆ ಪ್ರಕಟಣೆಯ ಮೂಲಕ ವಿನಂತಿ ಮಾಡಿದೆ