ಜಿಲ್ಲಾ ಸುದ್ದಿ

ಕುದ್ರೋಳಿ ಭಗವತೀ ಕ್ಷೇತ್ರ; ಕಳಿಯಾಟ ಮಹೋತ್ಸವದ ಪೂರ್ವಭಾವಿ ಸಮಿತಿ ರಚನಾ ಸಭೆ

ಪ್ರಸಿದ್ದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ 75 ವರ್ಷಗಳ ಬಳಿಕ ಮುಂದಿನ ವರ್ಷ ನಡೆಯಲಿರುವ ಸಂಭ್ರಮದ ಕಳಿಯಾಟ ಮಹೋತ್ಸವದ ಪುಣ್ಯಕಾರ್ಯಕ್ಕೆ ನಮ್ಮನ್ನು ಸಮರ್ಪಿಸಿಕೊಳ್ಳುವ ಮೂಲಕ ಧನ್ಯರಾಗೋಣ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ 2027ರಲ್ಲಿ ನಡೆಯಲಿರುವ ಕಳಿಯಾಟ ಮಹೋತ್ಸವದ ಹಿನ್ನೆಲೆಯಲ್ಲಿ ರವಿವಾರ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಸಮಿತಿ ರಚನಾ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

VNR GOLD

ಕಳಿಯಾಟ ಮಹೋತ್ಸವವು ವಿವಿಧ ಧಾರ್ಮಿಕ ಕಾರ್ಯಗಳ ಮೂಲಕ ನಡೆಯಲಿದ್ದು, ಇಂತಹ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳುವ ಯೋಗ ನಮ್ಮದಾಗಲಿದೆ. ಮಹೋತ್ಸವದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.ಭಗವತೀ ಕ್ಷೇತ್ರದ ಆಚಾರಪಟ್ಟವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಾಹೀರಾತು
INAUGURATION

ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್. ನಾಯಕ್, ಲಕುಮಿ ತಂಡದ ಮುಖ್ಯಸ್ಥ ಕಿಶೋರ್ ಡಿ. ಶೆಟ್ಟಿ, ಕ್ಷೇತ್ರದ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ, ಮೊಕ್ತೇಸರ ವಿಶ್ವನಾಥ ಮಂಕಿಸ್ಟ್ಯಾಂಡ್, ಉಳ್ಳಾಲ ಶ್ರೀ ಚಿರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯಾ, ಮೊಕ್ತೇಸರ ಸುರೇಶ್ ಭಟ್ನಗರ, ನಿಕಟಪೂರ್ವ ಕಾರ್ಪೊರೇಟರ್ ಲೀಲಾವತಿ ಪ್ರಕಾಶ್, ಅಡ್ಕ ಶ್ರೀ ಭಗವತೀ ಕ್ಷೇತ್ರದ ಕಾರ್ಯದರ್ಶಿ ಜಯಂತ ವಿ. ಬಂದ್ಯೋಡ್, ಉಪ್ಪಳ ಭಗವತೀ ಕ್ಷೇತ್ರದ ಅಧ್ಯಕ್ಷ ಸುಕುಮಾರ್, ಪಟ್ಟತ್ತೂರು ಭಗವತೀ ಕ್ಷೇತ್ರದ ಅಧ್ಯಕ್ಷ ಜಯರಾಮ್, ಭಾರತೀಯ ತೀಯ ಸಮಾಜ ಮಂಗಳೂರು ವಲಯದ ಅಧ್ಯಕ್ಷ ರಾಕೇಶ್ ಬಿಕರ್ನಕಟ್ಟೆ, ಉದ್ಯಮಿ ಅಶೋಕ್ ಕುಮಾರ್, ಬಂಟ್ವಾಳ ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಡಿಯಾಲ್ ಬೈಲ್ ಅಧ್ಯಕ್ಷ ಸದಾನಂದ ಶೆಟ್ಟಿ, ಯುವಜನ ಸಮಿತಿ ಅಧ್ಯಕ್ಷ ಜಗದೀಶ್ ಕದ್ರಿ, ಮಹಿಳಾ ಸಮಿತಿ ಅಧ್ಯಕ್ಷೆ ಆಶಾ ಚಂದ್ರಮೋಹನ್, ಮೊಕ್ತೇಸರರಾದ ಮೋನಪ್ಪ ಮಜಿ, ರಾಜಗೋಪಾಲ್, ರವೀಂದ್ರ ಕೆ., ಉಷಾ ಪ್ರಭಾಕರ್, ಸರಳ ನಾಗೇಶ್, ಉದಯ ಕುಡುಪು ಹಾಗೂ ಲೋಕೇಶ್ ಬೋಳಾರ್ ಉಪಸ್ಥಿತರಿದ್ದರು.
ಮೊಕ್ತೇಸರ ಸುಜನ್ ದಾಸ್ ಕುಡುಪು ಸ್ವಾಗತಿಸಿದರು. ವೈ.ಬಿ. ಸುಂದರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಧೀರ್ ಬಿ. ಜಪ್ಪು ಅವರು ಸಮಿತಿ ರಚನೆಗೆ ಸಹಕರಿಸಿದರು.
ವಿವಿಧ ಭಗವತೀ ಕ್ಷೇತ್ರಗಳ ಪದಾಧಿಕಾರಿಗಳು, ಗ್ರಾಮ ಸಂಘಗಳು, ಯುವಜನ ವೇದಿಕೆ ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.