ಬಂಟ್ವಾಳ: ಕಾರಂತ ಪ್ರತಿಷ್ಠಾನ (ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಎಸ್ ಕ್ರೀಟ್ ಅಡೆಷನ್ಸ್ ಇಂಡಿಯಾ ಪ್ರೈ ಲಿ, ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಉಸಿರು ಕೋಟ ವತಿಯಿಂದ ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ ಪ್ರದಾನ ಸಮಾರಂಭ ಕೋಟದ ಕಾರಂತ ಥೀಂ ಪಾರ್ಕ್ ನಲ್ಲಿ ನಡೆಯಿತು. ಗಣ್ಯರ ಸಮಕ್ಷಮ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಅವರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.