ಕಬಡ್ಡಿ ತೀರ್ಪುಗಾರರು, ಆಟಗಾರರ ಸಮ್ಮಿಲನ ಹಾಗೂ ಕಾರ್ಯಾಗಾರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕಬಡ್ಡಿ ಕ್ರೀಡೆಯ ಬೆಳವಣಿಗೆ, ನಿಯಮಾವಳಿ ಹಾಗೂ ತೀರ್ಪುಗಾರಿಕೆಯ ವಿವಿಧ ವಿಚಾರಗಳ ಕುರಿತು ಚರ್ಚಿಸುವ ಉದ್ದೇಶದಿಂದ ಜಿಲ್ಲಾ ಕಬಡ್ಡಿ ಸಂಘಟಕರು, ಆಟಗಾರರು ಹಾಗೂ ತೀರ್ಪುಗಾರರ ಸಮ್ಮಿಲನ ಮತ್ತು ಕಾರ್ಯಾಗಾರಬಿ.ಸಿ.ರೋಡ್‌ನ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಮಾರ್ಗದರ್ಶನದಲ್ಲಿ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತಾಲೂಕು ಅಸೋಸಿಯೇಷನ್‌ ಅಧ್ಯಕ್ಷ ಪುಷ್ಪರಾಜ್ ಚೌಟ ಅಧ್ಯಕ್ಷತೆಯಲ್ಲಿ ಹಾಗೂ ತೀರ್ಪುಗಾರರ ಮಂಡಳಿ ಅಧ್ಯಕ್ಷ ಸುರೇಶ್ ಮೈರಡ್ಕ ಅವರ ನೇತೃತ್ವದಲ್ಲಿ ಕಾರ್ಯಾಗಾರ ನಡೆಯಿತು.

ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಪುಷ್ಪರಾಜ್ ಚೌಟ

ಜಾಹೀರಾತು

 ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಾಲೂಕು ಅಸೋಸಿಯೇಷನ್‌ ಅಧ್ಯಕ್ಷ ಪುಷ್ಪರಾಜ್ ಚೌಟ, “ಗ್ರಾಮೀಣ ಭಾಗದಲ್ಲಿ ಕಬಡ್ಡಿ ಆಟಗಾರರು ಉದಯವಾಗಬೇಕು ಮತ್ತು ಅವರು ರಾಜ್ಯ ಮಟ್ಟದಿಂದ ಅಂತರರಾಷ್ಟ್ರೀಯ ಮಟ್ಟದವರೆಗೆ ಬೆಳೆಯಬೇಕು ಎಂಬುದೇ ನಮ್ಮ ಆಶಯ. ಅಮೆಚೂರ್ ಅಸೋಸಿಯೇಷನ್ನಿನ ನೀತಿ-ನಿಯಮಗಳನ್ನು ಪಾಲಿಸಿಕೊಂಡು ಕಬಡ್ಡಿ ಆಟಕ್ಕೆ ಪ್ರತಿಯೊಬ್ಬರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು,” ಎಂದು ಕರೆ ನೀಡಿದರು. ಜೊತೆಗೆ, ಅಸೋಸಿಯೇಷನ್‌ನ ಉದ್ದೇಶಗಳನ್ನು ಈಡೇರಿಸಲು ತಾಲೂಕು ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.

VNR GOLD

ನೂತನ ನಿಯಮಾವಳಿ ಕುರಿತು ಮಾಹಿತಿ

 ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕಬಡ್ಡಿ ಕ್ರೀಡೆಯ ನೂತನ ನಿಯಮಾವಳಿಗಳು, ತೀರ್ಪುಗಾರಿಕೆಯ ವಿಧಾನ, ಪಂದ್ಯ ನಿರ್ವಹಣೆ ಹಾಗೂ ತೀರ್ಪುಗಾರರು ಗಮನಿಸಬೇಕಾದ ಪ್ರಮುಖ ಅಂಶಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ಕಬಡ್ಡಿ ಕ್ರೀಡೆಯ ಬೆಳವಣಿಗೆ, ಪಂದ್ಯಗಳ ಆಯೋಜನೆ, ಆಟಗಾರರ ಶಿಸ್ತು ಹಾಗೂ ತೀರ್ಪುಗಾರಿಕೆಯ ಗುಣಮಟ್ಟ ಸುಧಾರಣೆ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಬಡ್ಡಿ ತೀರ್ಪುಗಾರರು, ಆಟಗಾರರು, ತಂಡಗಳ ವ್ಯವಸ್ಥಾಪಕರು ಹಾಗೂ ಸಂಘಟಕರು ಭಾಗವಹಿಸಿದ್ದರು.

ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ ವಿ.ವಿ., ಗೌರವ ಸಲಹೆಗಾರರಾದ ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ, ಜಿಲ್ಲಾ ತೀರ್ಪುಗಾರರ ಮಂಡಳಿಯ ಮಾಜಿ ಸಂಚಾಲಕ ಕೃಷ್ಣಪ್ಪ ಬಂಗೇರ, ರಾಜ್ಯ ತೀರ್ಪುಗಾರರ ಮಂಡಳಿ ಸಂಚಾಲಕ ಪ್ರಭಾಕರ ನಾರಾವಿ, ತಾಲೂಕು ಅಸೋಸಿಯೇಷನ್ ಗೌರವಾಧ್ಯಕ್ಷ ಬೇಬಿ ಕುಂದರ್, ಉಪಾಧ್ಯಕ್ಷ ನಾಗೇಶ್ ಶಂಭೂರ್ ಹಾಗೂ ತಾಲೂಕು ತೀರ್ಪುಗಾರರ ಮಂಡಳಿ ಸಂಚಾಲಕ ಹಬೀಬ್ ಮಾಣಿ ಉಪಸ್ಥಿತರಿದ್ದರು. ಸುರೇಶ್ ಮೈರಡ್ಕ ಸ್ವಾಗತಿಸಿದರು, ಪುರುಷೋತ್ತಮ ಕೋಲ್ಪೆ ಕಾರ್ಯಕ್ರಮ ನಿರೂಪಿಸಿದರು ಮತ್ತು ದೀಪಕ್ ಪೆರಾಜೆ ಧನ್ಯವಾದ ಸಮರ್ಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಬಡ್ಡಿ ತೀರ್ಪುಗಾರರು, ಆಟಗಾರರ ಸಮ್ಮಿಲನ ಹಾಗೂ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*