
ಹಿಂದು ಸಂಘಟನೆ ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ನೀಡಿದರೂ ಗೂಂಡಾ ಕಾಯ್ದೆ ದಾಖಲಿಸಿದ್ದಾಗಿ ಆರೋಪಿಸಿ ಸೋಮವಾರ ವಿಶ್ವ ಹಿಂದು ಪರಿಷದ್, ಬಜರಂಗದಳ ಮಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಪ್ರತಿಭಟನಾ ಸಭೆ ಬಿ.ಸಿ.ರೋಡ್ ರಕ್ತೇಶ್ವರಿ ಸನ್ನಿಧಿ ಬಳಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದ ಹಲವೆಡೆಗಳಿಂದ ಆಗಮಿಸಿದ ಕಾರ್ಯಕರ್ತರು ಸರಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾಮೂಹಿಕ ಹನುಮಾನ್ ಚಾಲೀಸ ಪಠಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಗುರುಪುರ ವಜ್ರದೇಹಿ ಮಠಾಧೀಶ ಶ್ರೀ ರಾಜಶೇಖರಾನಂದ ಸ್ವಾಮೀಜಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಕಾರ್ಯಕರ್ತರ ದಮನ ಕಾರ್ಯ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಿಕ್ಸೂಚಿ ಭಾಷಣ ಮಾಡಿದ ಹಿಂದು ಜಾಗರಣಾ ವೇದಿಕೆ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ, ತುಷ್ಟೀಕರಿಸುವ ಧೋರಣೆ ನಿಲ್ಲಿಸಿ, ಒಂದು ಪಕ್ಷದ ಪರವಾಗಿ ಅಧಿಕಾರಿಗಳು ವರ್ತಿಸಬೇಡಿ, ಹಿಂದು ಸಮಾಜದ ಕಣ್ಣಿಗೆ ಸುಣ್ಣ ಸವರುವ ಕೆಲಸ ಮಾಡಬೇಡಿ ಎಂದರು.

ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಮಾತನಾಡಿ, ಬಜರಂಗದಳವು ಸೇವೆ, ಸುರಕ್ಷೆ ಮತ್ತು ಸಂಸ್ಕಾರದ ತತ್ವಗಳೊಂದಿಗೆ ಬೆಳೆದ ಸಂಘಟನೆ.ನಮ್ಮನ್ನು ಕೆಣಕಲು ಹೋಗಬೇಡಿ. ಗೂಂಡಾ ಕಾಯ್ದೆ ವಾಪಸ್ ತೆಗೆದುಕೊಳ್ಳಿ, ಎಂದು ಆಗ್ರಹಿಸಿದರು. ವಿಹಿಂಪ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ ರಾವ್ ಪ್ರೇರಣಾ ಗೀತೆ ಹಾಡಿದರು. ಲೋಹಿತ್ ಪಣೋಲಿಬೈಲ್ ವಂದಿಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಸಂಘ ಪರಿವಾರ ಮುಖಂಡರು, ಬಿಜೆಪಿ ಶಾಸಕರ ಉಪಸ್ಥಿತರಿದ್ದರು. ವೇದಿಕೆಯಲ್ಲಿ ವಿಹಿಂಪ ಬಜರಂಗದಳ ಗ್ರಾಮಾಂತರ ಜಿಲ್ಲಾ ಕಾರ್ಯಾಧ್ಯಕ್ಷ ಗೋಪಾಲ್ ಕುತ್ತಾರ್, ಕಾರ್ಯದರ್ಶಿ ಸಚಿನ್ ಮೆಲ್ಕಾರ್ ಉಪಸ್ಥಿತರಿದ್ದರೆ, ಮುಂಭಾಗ ಆರೆಸ್ಸೆಸ್ ಮುಖಂಡರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್, ಡಾ. ಕಮಲ ಪ್ರಭಾಕರ ಭಟ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾಧ ಪದ್ಮನಾಭ ಕೊಟ್ಟಾರಿ, ಸಂಜೀವ ಮಠಂದೂರು, ಹಿಂದು ಸಂಘಟನೆ, ಹಾಗೂ ಬಿಜೆಪಿ ಪ್ರಮುಖರಾದ ಶರಣ್ ಪಂಪ್ ವೆಲ್, ಸತೀಶ್ ಕುಂಪಲ, ಸಂದೇಶ್ ಶೆಟ್ಟಿ ಅರೆಬೆಟ್ಟು, ಆರ್.ಚೆನ್ನಪ್ಪ ಕೋಟ್ಯಾನ್, ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ವಿಕಾಸ್ ಪುತ್ತೂರು, ಸುಲೋಚನಾ ಭಟ್, ದಿನೇಶ್ ಅಮ್ಟೂರು, ದೇವಪ್ಪ ಪೂಜಾರಿ, ರಶ್ಮಿತ್ ಶೆಟ್ಟಿ ಕೈತ್ರೋಡಿ, ನರಸಿಂಹ ಮಾಣಿ, ಸುನಿಲ್ ಕೊಟ್ಟಾರಿ, ಸಂತೋಷ್ ಸರಪಾಡಿ, ಬುಜಂಗ ಕುಲಾಲ್, ಪುರುಷೋತ್ತಮ ಸಾಲ್ಯಾನ್, ಪ್ರಭಾಕರ ಪ್ರಭು, ಗೋವಿಂದ ಪ್ರಭು, ರಮನಾಥ ರಾಯಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.


Be the first to comment on "ವಿಶ್ವ ಹಿಂದು ಪರಿಷತ್, ಬಜರಂಗದಳದಿಂದ ಬಿ.ಸಿ.ರೋಡ್ ಚಲೋ"