ಬಂಟ್ವಾಳ

ಸುರಕ್ಷಿತ ಸಮಾಜ ನಿರ್ಮಾಣದಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ತರ: ಪ್ರಭಾಕರ ಪ್ರಭು

ಬಂಟ್ವಾಳ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಮತ್ತು ಸಂವಿಧಾನದ ಕಾನೂನುಗಳನ್ನು ಪ್ರಜೆಗಳು ಪಾಲಿಸುವಂತೆ ಮಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯಪಟ್ಟಿದ್ದಾರೆ.

ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ  ಬಡ್ತಿಗೊಂಡಿರುವ, ಸಂಘದ ಸದಸ್ಯರೂ ಆಗಿರುವ ಹರೀಶ್ ಸಿದ್ದಕಟ್ಟೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಅಶಾಂತಿ ಉಂಟಾದಾಗ ಪೊಲೀಸ್ ಇಲಾಖೆಯು ಅಗತ್ಯ ಮಾರ್ಗದರ್ಶನ ಮತ್ತು ರಕ್ಷಣೆ ನೀಡುವುದರೊಂದಿಗೆ ಸುರಕ್ಷಿತ ಸಮಾಜ ನಿರ್ಮಾಣ ಮಾಡಲು ಸದಾ ಶ್ರಮಿಸಬೇಕು ಎಂದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ರಶ್ಮಿತ್ ಶೆಟ್ಟಿ ಹಾಗೂ ದಿನೇಶ್ ಪೂಜಾರಿ ಅವರು ಹರೀಶ್ ಅವರ ಪ್ರಾಮಾಣಿಕ ಪೊಲೀಸ್ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು.

VNR GOLD

 “ತನ್ನ ಹುಟ್ಟೂರಿನಲ್ಲಿ ಲಭಿಸಿದ ಈ ಗೌರವ ಇತರ ಎಲ್ಲಾ ಗೌರವಗಳಿಗಿಂತಲೂ ಅತ್ಯಂತ ಶ್ರೇಷ್ಠವಾದುದು. ಸಂಘದ ಸದಸ್ಯನೊಬ್ಬನನ್ನು ಗುರುತಿಸಿ ಈ ರೀತಿ ಅಭಿನಂದಿಸುತ್ತಿರುವುದು ಸಹಕಾರ ಸಂಘದ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ” ಎಂದು ಕೃತಜ್ಞತೆ ಸಲ್ಲಿಸಿದರು.

ಸಂಘದ ನಿರ್ದೇಶಕರುಗಳು, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಕೀರ್ತಿರಾಜ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಹಾಗೂ ಸಂಘದ ಪ್ರಮುಖ ಸದಸ್ಯರು ಉಪಸ್ಥಿತರಿದ್ದರು. ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.