ಬಂಟ್ವಾಳ

ಕಾಂಗ್ರೆಸ್ ನಿಂದ ಗಾಂಧಿ ಜಯಂತಿ ಆಚರಣೆ – ಸ್ವಚ್ಛತಾ ಆಂದೋಲನಕ್ಕೆ ಚಾಲನೆ

ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ತನ್ನ ಆದರ್ಶ ಜೀವನದಿಂದಲೇ ಜಗತ್ತಿನಲ್ಲಿ ಭಾರತಕ್ಕೆ ಗೌರವ ತಂದು ಕೊಟ್ಟ ಶ್ರೇಷ್ಠ ನಾಯಕರು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ನರಿಕೊಂಬು ಗ್ರಾಮದ ನಿನ್ನಿಪಡ್ಪು ಪರಿಶಿಷ್ಟ ಕಾಲೊನಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಸಹಭಾಗಿತ್ವದಲ್ಲಿ ಶುಕ್ರವಾರ ನಡೆದ ’ಸ್ವಚ್ಛತಾ ಆಂದೋಲನ ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

’ಪ್ರಸಕ್ತ ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯದ ಅಲೇರಿ ಮೂಲಸ್ಥಾನ ಅಭಿವೃದ್ಧಿಗೆ ರೂ 10ಕೋಟಿ ಅನುದಾನದ ಜೊತೆಗೆ ಅರ್ಹ ಫಲಾನುಭವಿಗಳಿಗೆ ಡಿ.ಸಿ.ಮನ್ನಾ ಜಮೀನು ನೀಡಲು ಮಹತ್ತರ ತೀರ್ಮಾನ ಕೈಗೊಂಡಿದೆ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಧ್ಯಕ್ಷ ಮಹಮ್ಮದ್ ಆಲಿ ಪುತ್ತೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ’ ಇಲ್ಲಿನ ಗಾಂಧಿ ಜಯಂತಿ ಆಚರಣೆಯು ಗಾಂಧೀಜಿ ಅವರ ಸಂದೇಶಕ್ಕೆ ಪೂರಕ ಮತ್ತು ಅರ್ಥಪೂರ್ಣವಾಗಿ ನಡೆದಿದೆ ’ ಎಂದರು.

ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ತಾ.ಪಂ. ಮಾಜಿ ಅಧ್ಯಕ್ಷ ಕೆ. ಪದ್ಮನಾಭ ರೈ, ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಿಳಾ ಕಾಂಗ್ರೆಸ್ ಘಟಕ ಅಧ್ಯಕ್ಷೆ ಐಡಾ ಸುರೇಶ್, ಜಿಲ್ಲಾ ಮುಖಂಡ ಚಿತ್ತರಂಜನ್ ಶೆಟ್ಟಿ ಮಾತನಾಡಿದರು.

ನಿನ್ನಿಪಡ್ಪು ದೈವಸ್ಥಾನ ಸಮಿತಿ ಅಧ್ಯಕ್ಷ ಮೋನಪ್ಪ ನಿನ್ನಿಪಡ್ಪು, ಪ್ರಮುಖರಾದ ಮಹಮ್ಮದ್ ನಂದಾವರ, ಆಲ್ಫೋನ್ಸ್ ಮಿನೆಜಸ್, ಆಲ್ಬರ್ಟ್ ಮಿನೆಜಸ್, ಆನಂದ ಸಾಲ್ಯಾನ್, ಉಮೇಶ್ ನೆಲ್ಲಿಗುಡ್ಡೆ, ರವೀಂದ್ರ ಸಪಲ್ಯ, ಪ್ರಸಾದ್ ಗಾಣಿಗ, ಸಿರಾಜ್ ಮದಕ, ಅಬ್ದುಲ್ ರಝಾಕ್ ಕೊಳ್ನಾಡು, ಇಕ್ಬಾಲ್, ಸಮದ್ ಕೈಕಂಬ, ಮೋಹನ್ ಚೆಂಡ್ತಿಮಾರ್ ಮತ್ತಿತರರು ಭಾಗವಹಿಸಿದ್ದರು. ಬಂಟ್ವಾಳ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಎ. ಬಿ. ಅಬ್ದುಲ್ಲಾ ವಂದಿಸಿದರು.

VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.