ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ಚೌಟ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್‌ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್‌ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್‌ಮಿಷನ್‌ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.


ವಿಟ್ಲದ ಎಂಆರ್‌ಎಫ್‌ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ 60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು


ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು  ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

VNR GOLD



ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*