ಪೊಳಲಿ ಯಕ್ಷೋತ್ಸವ-2026: ಅಕ್ಟೋಬರ್ 11ರಂದು ಪ್ರಶಸ್ತಿ ಪ್ರದಾನ, ಬಯಲಾಟ, ಸಂಸ್ಮರಣೆ, ಸನ್ಮಾನ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ರಾಜಾಂಗಣದಲ್ಲಿ ಯಕ್ಷಕಲಾ ಪೊಳಲಿ 31ನೇ ವರ್ಧಂತ್ಯುತ್ಸವದ ಪ್ರಯುಕ್ತ ಪೊಳಲಿ ಯಕ್ಷೋತ್ಸವ-2026 ಕಾರ್ಯಕ್ರಮ ಪೊಳಲಿ ಆಡಳಿತ ಮಂಡಳಿ ಮತ್ತು ಊರ ಪರವೂರ ಭಕ್ತರ ಸಹಕಾರದೊಂದಿಗೆ ಅಕ್ಟೋಬರ್ 11ರಂದು ಭಾನುವಾರ ನಡೆಯಲಿದೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಯಕ್ಷಕಲಾ ಪೊಳಲಿ ಸಂಚಾಲಕ ವೆಂಕಟೇಶ ನಾವಡ ಪೊಳಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಳೆದ ನಾಲ್ಕು ವರ್ಷಗಳಿಂದ ಯಕ್ಷಕಲಾ ಪೊಳಲಿ ವತಿಯಿಂದ ಪೊಳಲಿ ಯಕ್ಷೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಈ ಬಾರಿ ಕಟೀಲು ಮೇಳಗಳ ಸಂಚಾಲಕರಾದ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುವುದು. ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಸ್ಮೃತಿ ಗೌರವ ಪ್ರಶಸ್ತಿಯನ್ನು ಈ ವರ್ಷದಿಂದ ಆರಂಭಿಸಿದ್ದು, ಹಿರಿಯ ಹಿಮ್ಮೇಳ ಗುರುಗಳಾದ ಹರಿನಾರಾಯಣ ಬೈಪಡಿತ್ತಾಯ ಅವರಿಗೆ ನೀಡಿ ಗೌರವಿಸಲಾಗುವುದು. 15 ಮಂದಿ ಹಿರಿಯ ಕಲಾವಿದರಿಗೆ ಗೌರವ ನಿಧಿಯೊಂದಿಗೆ ಸನ್ಮಾನ, ಸಂಘಟನೆ, ಹಾಗೂ ಯಕ್ಷಗಾನಕ್ಕೆ ದುಡಿಯುವ ಮಹನೀಯರುಗಳಿಗೆ ಗೌರವ ಮತ್ತು ಕೀರ್ತಿಶೇಷರಾದ ಐವರು ಹಿರಿಯ ಕಲಾವಿದರ ಸಂಸ್ಮರಣೆ ನಡೆಯಲಿದೆ. ಬೆಳಗ್ಗೆ 8.30ರಿಂದ ರಾತ್ರಿ 10.30ರವರೆಗೆ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಮೂರು ಪೌರಾಣಿಕ ಯಕ್ಷಗಾನ ಬಯಲಾಟಗಳು ಪ್ರದರ್ಶನಗೊಳ್ಳಲಿವೆ. ಸಂಜೆ 5.30ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ, ಗೌರವಾರ್ಪಣೆ, ಸನ್ಮಾನ, ಸಂಸ್ಮರಣೆ ಹಾಗೂ ಬಯಲಾಟ ಕಾರ್ಯಕ್ರಮಗಳು ಜರುಗಲಿವೆ.  ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಭಾಗವಹಿಸುವರು ಎಂದರು.

ಜಾಹೀರಾತು

ಸಂಯೋಜಕ ಜನಾರ್ದನ ಅಮ್ಮುಂಜೆ ಮಾತನಾಡಿ, ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ರಾಜಾ ಯಯಾತಿ, ಮಧ್ಯಾಹ್ನ 3ರಿಂದ ಸಂಜೆ 5.30ವರೆಗೆ ಇಂದ್ರಕೀಲಕ, ರಾತ್ರಿ 7ರಿಂದ 10.30ರವರೆಗೆ ರಾಮಾಂಜನೇಯ ಪ್ರಸಂಗ ಪ್ರದರ್ಶನಗೊಳ್ಳಲಿದ್ದು, ಪ್ರಸಿದ್ಧ ಕಲಾವಿದರು ಭಾಗವಹಿಸುವರು ಎಂದರು.ಸುದ್ದಿಗೋಷ್ಠಿಯಲ್ಲಿ ಲೋಕೇಶ್ ಭರಣಿ, ಸುಬ್ರಾಯ ಕಾರಂತ ಪೊಳಲಿ, ಮೋಹನ್ ಬಿಲ್ವಪತ್ರೆ ಹಾಜರಿದ್ದರು.

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪೊಳಲಿ ಯಕ್ಷೋತ್ಸವ-2026: ಅಕ್ಟೋಬರ್ 11ರಂದು ಪ್ರಶಸ್ತಿ ಪ್ರದಾನ, ಬಯಲಾಟ, ಸಂಸ್ಮರಣೆ, ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*