ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಫಾರ್ಮ್ 7 ಆರ್ಜಿ – ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ತಹಸೀಲ್ದಾರ್ ಗೆ ದೂರು

ಬಂಟ್ವಾಳ: ಅರ್ಹ ಹಾಗೂ ಮಾನ್ಯ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರ್ಮ್ ನಂ. 7 ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಮಂಗಳವಾರ ಬೆಳಿಗ್ಗೆ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿತು.

ಇಲ್ಲೊಂದು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿರುವ ರಮಾನಾಥ ರೈ, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Ramanath Rai submitted a request to Bantwal Tahsildar urging that appropriate legal action should be taken against those who submitted false and baseless Form No. 7

ರೈ ಆರೋಪಗಳೇನು?

  • ದೊಡ್ಡ ಪ್ರಮಾಣದ ಸಂಚು ಆರೋಪ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಣಿ ಗ್ರಾಮದಲ್ಲಿ ನೂರಾರು ಮಂದಿಯ ಮತದಾನದ ಹಕ್ಕನ್ನು ಕಸಿಯಲು ಚುನಾವಣಾ ಆಯೋಗಕ್ಕೆ ಫಾರ್ಮ್ ನಂ. 7 ರ ದುರುಪಯೋಗಪಡಿಸಿಕೊಂಡು ನಕಲಿ ದಾಖಲೆ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲಾಗಿದೆ. ಸಾಲೆತ್ತೂರು ಸೇರಿದಂತೆ ಹಲವು ಗ್ರಾಮಗಳಲ್ಲೂ ಇಂತಹ ಘಟನೆಗಳು ನಡೆದಿವೆ ಎಂದು ರೈ ಆರೋಪಿಸಿದ್ದಾರೆ.
  • ಪ್ರಜಾಪ್ರಭುತ್ವಕ್ಕೆ ದ್ರೋಹ: ಯಾವುದೇ ಪಕ್ಷದವರಾಗಿರಲಿ, ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ವ್ಯವಸ್ಥಿತ ಕುತಂತ್ರ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುವ ದ್ರೋಹ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ದಿಷ್ಟ ಮತದಾರರನ್ನು ಗುರಿಯಾಗಿಸಿಕೊಂಡು, ಫಾರ್ಮ್ 7 ರ ಮೂಲಕ ಅರ್ಜಿ ಸಲ್ಲಿಸಲಾಗುತ್ತಿದೆ. ಮತದಾರ ಜೀವಂತವಾಗಿದ್ದರೂ ರಾಜಕೀಯವಾಗಿ ಆತನನ್ನು ಇಲ್ಲದಂತೆ ಮಾಡುವ ಕೃತ್ಯವಿದು ಎಂದು ರೈ ದೂರಿದ್ದಾರೆ. ಯಾವುದೇ ಪಕ್ಷದ ಮತದಾರರಾಗಿದ್ದರೂ, ಮತ ಚಲಾಯಿಸಲು ಅರ್ಹರಾಗಿರುವ ಪ್ರತಿಯೊಬ್ಬರ ಹೆಸರನ್ನೂ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ರೈ ಬಳಿಕ ಸುದ್ದಿಗಾರರಿಗೆ ಹೇಳಿದರು.
VNR GOLD

ಈ ಸಂದರ್ಭದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್ ಹಾಗೂ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ಎಲ್. ರೋಡ್ರಿಗಸ್, ಪದ್ಮಶೇಖರ ಜೈನ್ , ಸಂಜೀವ ಪೂಜಾರಿ ಕೆ, ಬಿ.ಎಂ. ಅಬ್ಬಾಸ್ ಆಲಿ, ಸುದೀಪ್ ಶೆಟ್ಟಿ ಮಾಣಿ, ಬಾಲಕೃಷ್ಣ ಆಳ್ವ, ಮಹಮ್ಮದ್ ಶರೀಫ್, ಇಬ್ರಾಹಿಂ ಕೆ ಮಾಣಿ, ಸುದರ್ಶನ್ ಜೈನ್ ಪಂಜಿಕಲ್ಲು, ಪದ್ಮನಾಭ ರೈ, ಮಹಮ್ಮದ್ ನಂದಾವರ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸದಾಶಿವ ಬಂಗೇರ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ, ಮನೋಹರ ನೇರಂಬೋಳು, ಹಸೈನಾರ್,  ಐಡಾ ಸುರೇಶ್, ಉಮೇಶ್ ಬೋಳಂತೂರು, ಸುರೇಶ್ ನಾವೂರ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಫಾರ್ಮ್ 7 ಆರ್ಜಿ – ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ತಹಸೀಲ್ದಾರ್ ಗೆ ದೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*