ಬಂಟ್ವಾಳ: ಅರ್ಹ ಹಾಗೂ ಮಾನ್ಯ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರ್ಮ್ ನಂ. 7 ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಮಂಗಳವಾರ ಬೆಳಿಗ್ಗೆ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿತು.
ಇಲ್ಲೊಂದು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿರುವ ರಮಾನಾಥ ರೈ, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್ ಹಾಗೂ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ಎಲ್. ರೋಡ್ರಿಗಸ್, ಪದ್ಮಶೇಖರ ಜೈನ್ , ಸಂಜೀವ ಪೂಜಾರಿ ಕೆ, ಬಿ.ಎಂ. ಅಬ್ಬಾಸ್ ಆಲಿ, ಸುದೀಪ್ ಶೆಟ್ಟಿ ಮಾಣಿ, ಬಾಲಕೃಷ್ಣ ಆಳ್ವ, ಮಹಮ್ಮದ್ ಶರೀಫ್, ಇಬ್ರಾಹಿಂ ಕೆ ಮಾಣಿ, ಸುದರ್ಶನ್ ಜೈನ್ ಪಂಜಿಕಲ್ಲು, ಪದ್ಮನಾಭ ರೈ, ಮಹಮ್ಮದ್ ನಂದಾವರ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸದಾಶಿವ ಬಂಗೇರ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ, ಮನೋಹರ ನೇರಂಬೋಳು, ಹಸೈನಾರ್, ಐಡಾ ಸುರೇಶ್, ಉಮೇಶ್ ಬೋಳಂತೂರು, ಸುರೇಶ್ ನಾವೂರ ಮುಂತಾದವರು ಉಪಸ್ಥಿತರಿದ್ದರು.
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)