
ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾದ ‘ಉತ್ಥಾನ’ ರಾಷ್ಟ್ರೀಯ ಸಂಸ್ಕಾರ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತೆ ಹಾಗೂ ಅತ್ಯುತ್ತಮ ಪೋಷಕ ನಟಿ ಪುರಸ್ಕೃತ ರೂಪಶ್ರೀ ವರ್ಕಾಡಿ ಅವರು, “ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಲು ಇಂತಹ ಸಂಸ್ಕಾರ ಶಿಬಿರಗಳು ಅತ್ಯಂತ ಸಹಕಾರಿ. ಜೀವನದಲ್ಲಿ ಸಿಗುವ ಪ್ರತಿಯೊಂದು ಅವಕಾಶವನ್ನೂ ಧನಾತ್ಮಕವಾಗಿ ಬಳಸಿಕೊಂಡಾಗ, ಅದು ನಮ್ಮ ಭವಿಷ್ಯದ ದಾರಿದೀಪವಾಗುತ್ತದೆ” ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಉತ್ಥಾನ ರಾಷ್ಟ್ರೀಯ ಸಂಸ್ಕಾರ ಶಿಬಿರವು ವಿದ್ಯಾರ್ಥಿನಿಯರಲ್ಲಿ ಜ್ಞಾನ, ಪ್ರತಿಭೆ, ಆತ್ಮವಿಶ್ವಾಸ ಹಾಗೂ ನೈತಿಕ ಮೌಲ್ಯಗಳನ್ನು ವೃದ್ಧಿಸುವ ವಿಶಿಷ್ಟ ವೇದಿಕೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯ ನಾಗೇಶ್ ಕಲ್ಲಡ್ಕ, ರಾಷ್ಟ್ರ ಸೇವಿಕಾ ಸಮಿತಿಯ ಹೊಯ್ಸಳ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ. ಕಮಲ ಪ್ರಭಾಕರ್ ಭಟ್, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ವಸಂತ್ ಬಲ್ಲಾಳ್ ಉಪಸ್ಥಿತರಿದ್ದರು. ಉಪನ್ಯಾಸಕಿ ಚೈತನ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಶೈಲಿನಿ ಸ್ವಾಗತಿಸಿದರು. ಉಪನ್ಯಾಸಕಿ ನಯನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶೋಭಾ ವಂದಿಸಿದರು.


Be the first to comment on "ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ‘ಉತ್ಥಾನ’ ರಾಷ್ಟ್ರೀಯ ಸಂಸ್ಕಾರ ಶಿಬಿರ"