ಬಂಟ್ವಾಳ

ಕೈಕುಂಜೆ–ಅಲೆತ್ತೂರು ಸಂಪರ್ಕ ರಸ್ತೆ, ಕಿರು ಸೇತುವೆ ಉದ್ಘಾಟನೆ

| ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಪ್ರಮುಖವಾಗಿದ್ದು, ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

VNR GOLD

ಬಂಟ್ವಾಳದ ಬಿಸಿರೋಡಿನಿಂದ ಕೈಕುಂಜೆ ಅಲೆತ್ತೂರು ಮೂಲಕ ಗ್ರಾಮದೈವ ಪಂಜುರ್ಲಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರೂ. 20 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ರೂ. 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಿರು ಸೇತುವೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾಹೀರಾತು

ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದರಿಂದ ದೈನಂದಿನ ಸಂಚಾರ ಸುಗಮವಾಗುವುದರ ಜತೆಗೆ ಸ್ಥಳೀಯ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ. ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ರಸ್ತೆ, ಸೇತುವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸಿ ಕೈಗೆತ್ತಿಕೊಳ್ಳುವ ಇಂತಹ ಕಾಮಗಾರಿಗಳು ಗ್ರಾಮೀಣ ಭಾಗದ ಜನರಿಗೆ ದೀರ್ಘಕಾಲದ ಪ್ರಯೋಜನ ಒದಗಿಸಲಿವೆ ಎಂದು ಅವರು ಹೇಳಿದರು.

ಬಿಸಿರೋಡಿನಿಂದ ಕೈಕುಂಜೆ ಅಲೆತ್ತೂರು ಮೂಲಕ ಪಂಜುರ್ಲಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಪೂರ್ಣಗೊಂಡಿರುವುದರಿಂದ ಸ್ಥಳೀಯ ನಿವಾಸಿಗಳು ಹಾಗೂ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗಲಿದೆ. ಕಿರು ಸೇತುವೆಯೂ ನಿರ್ಮಾಣಗೊಂಡಿರುವುದರಿಂದ ಈ ಭಾಗದ ಜನರ ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಮಾಜಿ ಸದಸ್ಯ ಗೋವಿಂದ ಪ್ರಭು, ಬೂತ್ ಅಧ್ಯಕ್ಷರಾದ ಶಿವರಾಜ್ ಕೈಕುಂಜೆ, ನಿತಿನ್ ಅಲೆತ್ತೂರು, ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಟೈಲರ್ ಕೈಕಂಬ, ಶಕ್ತಿ ಕೇಂದ್ರದ ಪ್ರಮುಖ್ ನವೀನ್ ಶೆಟ್ಟಿ ಕೈಕಂಬ, ಮಂಗಳ ಫ್ರೆಂಡ್ಸ್ ಅಲೆತ್ತೂರು ಅಧ್ಯಕ್ಷ ಶ್ರೀಧರ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಅಶ್ವಥ್ ಶೆಟ್ಟಿ ಅಲೆತ್ತೂರು, ವಿಜಯ್ ಅಲೆತ್ತೂರು, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಹಾಗೂ ಮಹೇಶ್ ಜುಮಾದಿಗುಡ್ಡೆ, ಸ್ಥಳೀಯರಾದ ವಾಸು ಮಾಸ್ಟರ್, ಪ್ರಶಾಂತ್, ಶಶಿಧರ ಕೈಕುಂಜೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts