ಮೆಲ್ಕಾರ್: ಶ್ರೀ ಶಂಕರ ಪತ್ತಿನ ಸಹಕಾರ ಸಂಘ ಸ್ಥಳಾಂತರಿತ ಕಚೇರಿ ಉದ್ಘಾಟನೆ

ಮೆಲ್ಕಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಂಕರ ಪತ್ತಿನ ಸಹಕಾರ ಸಂಘದ ಸ್ಥಳಾಂತರಿತ ಕಚೇರಿ ಉದ್ಘಾಟನಾ ಸಮಾರಂಭ ಸೋಮವಾರ ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿರುವ ಸರಾ ಆರ್ಕೇಡ್ ನ ಪ್ರಥಮ ಮಹಡಿಯಲ್ಲಿ ನಡೆಯಿತು.

ಪ್ರಧಾನ ಕಚೇರಿಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮೀಜಿ, ಸಹಕಾರ ತತ್ವದ ಮೂಲಕ ಆರಂಭಗೊಂಡಿರುವ ಸಂಘವು ಗ್ರಾಹಕರ ವಿಶ್ವಾಸವನ್ನು ಗಳಿಸಿದ್ದು, ಪರಸ್ಪರ ವಿಶ್ವಾಸ ಇದ್ದಾಗ ಸಂಘ ಮುನ್ನಡೆಯಲು ಸಾಧ್ಯ. ನಿಮ್ಮ ಹಣ ಭದ್ರವಾಗಿಡಲು ವ್ಯವಸ್ಥೆಗಳು ಇಲ್ಲಿವೆ ಎಂದು ಶುಭ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ, ವಿಶೇಷ ಠೇವಣಿಗಳ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಯಾಗಿ ಉದ್ಯಮಿ ಸಂಜೀವ ಪೂಜಾರಿ ಗುರುಕೃಪಾ ಶುಭ ಹಾರೈಸಿದರು. ಉದ್ಯಮಿಗಳಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಎಂ.ಎನ್. ಕುಮಾರ್ ಮೆಲ್ಕಾರ್, ಬಿ.ಯೋಗೀಶ್ ನಾಯಕ್, ಸಹಕಾರ ಅಭಿವೃದ್ಧಿ ಅಧಿಕಾರಿ ಡಾ. ಜ್ಯೋತಿ ಡಿ, ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಸಂಜೀವ ನಾಯ್ಕ ನಿರ್ಬೈಲು ಉಪಸ್ಥಿತರಿದ್ದರು. ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಡಿಸೆಂಬರ್ ಒಳಗೆ ಎರಡು ವರ್ಷಗಳ ಅವಧಿಗೆ ಠೇವಣಿಗೆ ಶೇ.11 ಬಡ್ಡಿದರ ನೀಡಲಾಗುತ್ತದೆ. ಹಿರಿಯ ನಾಗರಿಕರನ್ನು ದೃಷ್ಟಿಯಾಗಿಟ್ಟುಕೊಂಡು ಸಂಘ ಕಳೆದ ಐದು ವರ್ಷಗಳಿಂದ ಮುನ್ನಡೆಯುತ್ತಿದ್ದು, ಸಾಲ ನೀಡಿಕೆಯಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳಲಾದ ಕಾರಣ ಗ್ರಾಹಕರ ವಿಶ್ವಾಸ ಗಳಿಸಿದೆ ಎಂದರು. ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿದರು. ನಿರ್ದೇಶಕರಾದ ಅನಂತ ಪ್ರಭು ವಂದಿಸಿದರು. ನಿರ್ದೇಶಕ ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು. ಕೀರ್ತನಾ ಹೊಳ್ಳ ಪ್ರಾರ್ಥಿಸಿದರು. ನಿರ್ದೇಶಕರಾದ ವೇದವ್ಯಾಸ ರಾಮಕುಂಜ, ಎಂ.ಈಶ್ವರ ಭಟ್ಟ, ಅನಂತ ಪ್ರಭು, ಜಯರಾಮ ಪೂಜಾರಿ, ಜಯರಾಮ ಶೇಖ, ಮುರಳೀಧರ ರಾವ್, ಭವಾನಿಶಂಕರ ಶೆಟ್ಟಿ, ರವೀಂದ್ರ ಕುಕ್ಕಾಜೆ, ರಮಾ ಎಸ್. ಭಂಡಾರಿ, ರಾಜೀವಿ ಎನ್. ವೃತ್ತಿಪರ ನಿರ್ದೇಶಕರಾದ ರಾಕೋಡಿ ಈಶ್ವರ ಭಟ್ ಮತ್ತು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೆಲ್ಕಾರ್: ಶ್ರೀ ಶಂಕರ ಪತ್ತಿನ ಸಹಕಾರ ಸಂಘ ಸ್ಥಳಾಂತರಿತ ಕಚೇರಿ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*