ವ್ಯಕ್ತಿತ್ವ ವಿಕಸನ ಶಿಬಿರಗಳು ಯಶಸ್ವಿ ನಾಯಕರನ್ನು ರೂಪಿಸುತ್ತವೆ:  ಭುವನೇಶ್ ಪಚ್ಚಿನಡ್ಕ

ವ್ಯಕ್ತಿತ್ವ ವಿಕಸನ ಶಿಬಿರಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಶಿಸ್ತು ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶಿಬಿರಗಳ ಮೂಲಕ ಯುವಜನರು ತಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು ಸಮಾಜಕ್ಕೆ ಮಾದರಿಯಾಗುವ ನಾಯಕರಾಗಿ ರೂಪುಗೊಳ್ಳಲು ಸಾಧ್ಯ ಎಂದು ಯುವವಾಹಿನಿ ರಜತ ವರ್ಷದ ಅಧ್ಯಕ್ಷರು ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಹೇಳಿದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬಿ.ಸಿ.ರೋಡಿನ  ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾದ ವಿಷನ್ 2026 ‘ಯುವಕರ ದೃಷ್ಟಿಕೋನ’ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ  ಮಾತನಾಡಿದರು. ಉದ್ಯಮಿ ಲೋಕೇಶ್ ಸುವರ್ಣ ಜಕ್ರಿಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ವ್ಯಕ್ತಿತ್ವ ವಿಕಸನ ತರಬೇತುದಾರ ಸ್ಮಿತೇಶ್ ಎಸ್. ಬಾರ್ಯ ಮಾತನಾಡಿ, ಅವಕಾಶಗಳಿಗಾಗಿ ಕಾಯುವುದಕ್ಕಿಂತ ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಂಡು ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲುಗಳನ್ನು ಅಂತ್ಯವೆಂದು ಭಾವಿಸದೆ, ಅವುಗಳನ್ನು ಅನುಭವದ ಪಾಠಗಳಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಜಾಹೀರಾತು

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರಕೋಡಿ ಅಧ್ಯಕ್ಷತೆ ವಹಿಸಿದ್ದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಗೀತಾ ಜಗದೀಶ್ ವಂದಿಸಿದರು. ಕಿರಣ್‌ರಾಜ್ ಪೂಂಜರಕೋಡಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವ್ಯಕ್ತಿತ್ವ ವಿಕಸನ ಶಿಬಿರಗಳು ಯಶಸ್ವಿ ನಾಯಕರನ್ನು ರೂಪಿಸುತ್ತವೆ:  ಭುವನೇಶ್ ಪಚ್ಚಿನಡ್ಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*