ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಸಂಗಬೆಟ್ಟು ಗ್ರಾಮ ಪಂಚಾಯತ್ ಜಂಟಿ ಸಹಯೋಗದಲ್ಲಿ ಸಿದ್ಧಕಟ್ಟೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಹರಿಣಾಕ್ಷಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾನಾಯಕ್ ಕಾರ್ಯಕ್ರಮ ಸಂಘಟಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಪಂಚಾಯತ್ ಕಾರ್ಯದರ್ಶಿ ರೋಹಿಣಿ ಹಾಗೂ ಪಂಚಾಯತ್ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು
(more…)
| ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಮಾಹಿತಿ ಕಾರ್ಯಕ್ರಮ (more…)