ವಿಟ್ಲ ಶ್ರೀ ದೇವತಾ ಸಮಿತಿ ವಿಟ್ಲ ಇದರ 55 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಉದ್ಘಾಟನೆ ಗೊಂಡಿತು. ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.
ಶ್ರೀ ದೇವತಾ ಸಮಿತಿಯ ಅಧ್ಯಕ್ಷ ನರ್ಸಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಧಾಕೃಷ್ಣ ನಾಯಕ್ ಧ್ವಜಾರೋಹಣ ಮಾಡಿದರು. ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯವಾದಿ, ಕರ್ನಾಟಕ ಬ್ಯಾಂಕ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕ ಡಾ ಅರುಣ್ ಶ್ಯಾಮ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೊಟ್ಟು, ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ ಗಾಯತ್ರಿ ಗೀತಪ್ರಕಾಶ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ ಅರ್ಶಿಯಾ ಖಾನ್ ಅವರನ್ನು ಸನ್ಮಾನಿಸಲಾಯಿತು.