ಶಂಭೂರಿನ ದ. ಕ. ಜಿ. ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶಕ್ಕಾಗಿ ಯುವಜನತೆ ಎಂಬ ಧ್ಯೇಯದೊಂದಿಗೆ ಏಳು ದಿನಗಳ ಕಾಲ ನಡೆದ ಬಿ.ಮೂಡ ಸ. ಪ. ಪೂ. ಕಾಲೇಜಿನ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ನೆರವೇರಿತು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಸಮಾರೋಪ ಭಾಷಣ ಮಾಡಿ, ಈ ಶಿಬಿರದ ಕಲಿಕಾಂಶಗಳು ಶಿಬಿರಾರ್ಥಿಗಳ ನಿತ್ಯಜೀವನದಲ್ಲಿ ಪ್ರತಿಫಲನವಾಗಬೇಕು. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ರಜಾ ಕಾಲವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕ ವಿನೋದ್ ಎ, ಸಜಿಪಮೂಡ ಪಿ.ಯು. ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ನಾಯ್ಕ್ ಕೆ, ಶಂಭೂರು ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ವಿಮಲಾ, ಸದಸ್ಯ ದಯಾನಂದ ಅಡೆಪಿಲ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಆನಂದ ಸಾಲಿಯಾನ್, ಸ್ಥಳೀಯ ವ್ಯಾಯಾಮ ಶಾಲೆಯ ಅಧ್ಯಕ್ಷ ಆನಂದ ಎ, ಶಂಭೂರು, ಮಖ್ಯಶಿಕ್ಷಕ ಜಯರಾಮ ಡಿ. ಪಡ್ರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಹ ಶಿಬಿರಾಧಿಕಾರಿ ಇರ್ಷಾದ್ ಸ್ವಾಗತಿಸಿದರು. ಶಿಬಿರಾಧಿಕಾರಿ ದಾಮೋದರ ಇ ನಿರೂಪಿಸಿದರು. ಉಪನ್ಯಾಸಕ ವಿನೋದ್ ಎ ಧನ್ಯವಾದ ಸಲ್ಲಿಸಿದರು.ಬಳಿಕ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.