ಬಂಟ್ವಾಳ: ಸಜೀಪಮೂಡದ ಸುಭಾಷ್ ನಗರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಠಡಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶಾಲೆಯಲ್ಲಿ ನಡೆಯುವ ಶಾರದೋತ್ಸವದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಸ್.ಕೆ.ಸ್ಟೀಲ್ಸ್ ನ ಪ್ರಭು, ಆಲ್ ಕಾರ್ಗೊ ಮುಂಬೈ ಚೇರ್ಮನ್ ಶಶಿಕಿರಣ್ ಶೆಟ್ಟಿ ಮತ್ತು ಸಂಧ್ಯಾ ವಿವೇಕ್ ಶೆಟ್ಟಿ ನಗ್ರಿಗುತ್ತು ಅವರು ಸುಮಾರು ೩೫ ಲಕ್ಷ ರೂಗಳ ವೆಚ್ಚದಲ್ಲಿ ಈ ಕೊಡುಗೆ ನೀಡಿದ್ದಾರೆ.
ಶನಿವಾರ ಸಂಜೆ ಕೊಠಡಿಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಶಾಲೆಗಳಲ್ಲಿ ಶಾರದೋತ್ಸವ ಕಾರ್ಯಕ್ರಮ ಪರಂಪರೆಯಿಂದ ನಡೆದುಕೊಂಡು ಬಂದಿದ್ದು, ದಾನಿಗಳು ಕೊಠಡಿಗಳನ್ನು ದಾನವಾಗಿ ನೀಡುವ ಮೂಲಕ ಅರ್ಥಪೂರ್ಣ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಈ ಸಂದರ್ಭ ಶತಮಾನೋತ್ಸವ ಶಾರದಾ ಪೂಜಾ ಸಮಿತಿ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀ ಶಾರದಾ ಪೂಜಾ ಸಮಿತಿ ಅಧ್ಯಕ್ಷ ಬಿ.ಶೋಭಿತ್ ಪೂಂಜ, ಸುಭಾಷ್ ಯುವಕ ಮಂಡಲ ಅಧ್ಯಕ್ಷ ಎಸ್. ಶ್ರೀಕಾಂತ್ ಶೆಟ್ಟಿ, ಟೆಕ್ನೋಥರ್ಮಾ ಫರ್ನೇಸಸ್ ಮುಂಬೈ ನಿರ್ದೇಶಕ ಬಿ.ರಾಮಪ್ರಸಾದ್ ರಾವ್, ಬಳ್ಳಾರಿ ಜೆಎಸ್ ಡಬ್ಲ್ಯು ಸ್ಟೀಲ್ ಲಿಮಿಟೆಡ್ ಜಿಎಂ ಸಂತೋಷ್ ಕೊಂಡೆ, ಉದ್ಯಮಿಗಳಾಧ ಹರಿಪ್ರಸಾದ್ ಶೆಟ್ಟಿ ನಗ್ರಿಗುತ್ತು, ಜಿನರಾಜ್ ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಸಹಿತ ಸುಭಾಷ್ ಯುವಕ ಮಂಡಲ, ಶ್ರೀ ಶಾರದಾ ಪೂಜಾ ಸಮಿತಿ, ಶತಮಾನೋತ್ಸವ ಶಾರದಾ ಪೂಜಾ ಸಮಿತಿಯ ಸರ್ವ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.