ಕಲ್ಲಡ್ಕ

ಕಲ್ಲಡ್ಕ ಶ್ರೀ ಶಾರದೋತ್ಸವ: ಸಾಧಕರಿಗೆ ಸನ್ಮಾನ, ಪುರಸ್ಕಾರ

ದುಷ್ಟಶಕ್ತಿಗಳ ಮೋಸದ ಆಲೋಚನೆಗಳಿಗೆ ಶಕ್ತಿ ದೇವತೆಯ ಆಯುಧದಂತೆ ಧೈರ್ಯದಿಂದ ಉತ್ತರಿಸುವ ಅಗತ್ಯವಿದೆ ಎಂದು ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆಯ ವಿಭಾಗ ಮುಖ್ಯಸ್ಥ ರವೀಶ್ ಪಡುಮಲೆ ಹೇಳಿದರು.

ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶಾರದಾ ಪೂಜಾ ಉತ್ಸವ ಸಮಿತಿಯ ಆಶ್ರಯದಲ್ಲಿ ಕಲ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಅವರು, ನವರಾತ್ರಿಯ ಕೊನೆಯಲ್ಲಿ ದೇವತೆಗಳು ದುಷ್ಟಶಕ್ತಿಗಳನ್ನು ನಿಗ್ರಹಿಸಿದಂತೆ, ನಮ್ಮೊಳಗಿನ ದುಷ್ಟ ಚಿಂತನೆಗಳು ಹಾಗೂ ದುಶ್ಚಟಗಳೂ ನಾಶವಾಗಬೇಕು ಎಂದರು.

ದೇಶವನ್ನು ಕಾಯುವ ಸೈನಿಕರ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರಲ್ಲಿ ದೇಶಭಕ್ತಿಯ ಭಾವನೆ ಬೆಳೆಸಬೇಕು. ಸಾರ್ವಜನಿಕ ಉತ್ಸವಗಳು ಜಾತಿ-ಭೇದವಿಲ್ಲದೆ ಎಲ್ಲರೂ ಒಗ್ಗೂಡಿ ಆಚರಿಸುವ ವೇದಿಕೆಗಳಾಗಬೇಕು. ದೇವಾಲಯ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರವೇಶಿಸುವಾಗ ಪಾದರಕ್ಷೆಗಳನ್ನು ಹೊರಗಿಡುವಂತೆ, ಮನಸ್ಸಿನಲ್ಲಿರುವ ಜಾತಿ-ಭೇದಗಳನ್ನೂ ಹೊರಗಿಟ್ಟು ಎಲ್ಲರೂ ಒಂದಾಗಿ ಸೇರುವಂತಾಗಬೇಕು ಎಂದು ಅವರು ಕರೆ ನೀಡಿದರು.

ಜಾಹೀರಾತು

ರಾಜ್ಯ ಬಾಲಭವನ ಸೊಸೈಟಿಯ ಮಾಜಿ ಅಧ್ಯಕ್ಷೆ ಸುಲೋಚನಾ ಜಿ. ಕೆ. ಭಟ್ ಅಧ್ಯಕ್ಷತೆ ವಹಿಸಿದ್ದರು. ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸುಧಾಕರ ರೈ ಬೋಳಂತೂರು, ಗೋಳ್ತಮಜಲು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್, ಕೊಳಕೀರು ತುಡರ್‌ನ ಅಧ್ಯಕ್ಷ ಶಿವಪ್ರಸಾದ್ ಕೊಟ್ಟಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲ ಶುಕರಾಜ ಎಸ್. ಕೊಟ್ಟಾರಿ ಹಾಗೂ ಶಿವಂ ಕಡೇಶಿವಾಲಯದ ಸಂಚಾಲಕ ಸಂಪತ್ ಕಡೇಶಿವಾಲಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು .

ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಡೋಲು ವಾದಕ ಶ್ರೀನಿವಾಸ ದೇವಾಡಿಗ ಅವರಿಗೆ ಗ್ರಾಮ ಗೌರವ ನೀಡಿ ಸನ್ಮಾನಿಸಲಾಯಿತು. ಚಲನಚಿತ್ರ ನಿರ್ದೇಶಕ ಪ್ರಶಾಂತ್ ಆಳ್ವ ಅವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಕೆ. ಶಾಂತರಾಮ ಆಚಾರ್ ಅವರ ಸ್ಮರಣಾರ್ಥ ನೀಡಲಾಗುವ ‘ಶಾಂತಶ್ರೀ’ ಪ್ರಶಸ್ತಿಯನ್ನು ಈ ಬಾರಿ ಕಲಾಸೇವೆಗಾಗಿ ಹಿರಿಯ ಕಲಾವಿದ ಬಿ. ಕೆ. ರಾಜ್ ನಂದಾವರ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಎಸ್.ಎಸ್.ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು

ಶಾರದಾ ಪೂಜಾ ಉತ್ಸವ ಸಮಿತಿ ಅಧ್ಯಕ್ಷ ಗಣೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿ ರಾಜೇಶ್ ಆಚಾರ್ಯ ಉಪಸ್ಥಿತರಿದ್ದರು. ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಯತೀನ್ ಕಲ್ಲಡ್ಕ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.