ಬಂಟ್ವಾಳ: ವಿಜಯದಶಮಿಯ ಶುಭದಿನದ ಅಂಗವಾಗಿ ಬಿಸಿರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಬುಧವಾರ ತೆನೆ ಪೂಜೆ, ತೆನೆ ವಿತರಣೆ ಹಾಗೂ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.
ಇದೇ ಸಂದರ್ಭ ಮಕ್ಕಳಿಗೆ ವಿದ್ಯಾರಂಭ ಕಾರ್ಯಕ್ರಮ ನಡೆಯಿತು. ಬಿಸಿರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಅ. 11ರಿಂದ ಆರಂಭಗೊಂಡ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ದಿನಗಳಲ್ಲಿ ಪ್ರತಿದಿನ ಸಂಜೆ ವಿವಿಧ ಸಂಘಗಳ ವತಿಯಿಂದ ಭಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.