ಬಂಟ್ವಾಳ

ಕಲ್ಲಡ್ಕ ಕಲಾನಿಕೇತನದ ‘ರಜತ ಕಲಾಯಾನ’ ಸಮಾರೋಪ

ಭರತನಾಟ್ಯವು ಕೇವಲ ನೃತ್ಯಕಲೆಯಲ್ಲ; ಸಂಸ್ಕಾರ, ಶಿಸ್ತು ಹಾಗೂ ಗುರು-ಶಿಷ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಪ್ರಬಲ ಮಾಧ್ಯಮವಾಗಿದೆ. ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸುವ ಜತೆಗೆ, ದೈಹಿಕ ಆರೋಗ್ಯ ಮತ್ತು ಮಾನಸಿಕ ಸ್ಥೈರ್ಯವನ್ನು ವೃದ್ಧಿಸುವ ಶಕ್ತಿ ಈ ಕಲೆಯಲ್ಲಿದೆ ಎಂದು ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು.

ಶುಕ್ರವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕಲ್ಲಡ್ಕದ ಕಲಾನಿಕೇತನ ಸಂಸ್ಥೆಯ ‘ರಜತ ಕಲಾಯಾನ’ದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಸಂಸ್ಥೆಯ ಮೂಲಕ ಇನ್ನಷ್ಟು ಉತ್ತಮ ಕಲಾವಿದರು ರೂಪುಗೊಳ್ಳಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಭರತನಾಟ್ಯವು ಹೃದಯಕ್ಕೆ ವಿಶಿಷ್ಟ ಕಂಪನವನ್ನು ನೀಡುವುದರ ಜತೆಗೆ ಮಾನಸಿಕ ಶಕ್ತಿಯನ್ನೂ ತುಂಬುತ್ತದೆ. ಭರತನಾಟ್ಯದಲ್ಲಿ ಹಿನ್ನೆಲೆ ಗಾಯಕರ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ ಎಂದರು.

ಜಾಹೀರಾತು

ಪುತ್ತೂರಿನ ವಿಶ್ವಕಲಾನಿಕೇತನ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ (ರಿ.) ಸಂಸ್ಥೆಯ ನಿರ್ದೇಶಕಿ, ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ. ರೈ ಹಾಗೂ ಗೋವಾದ ಶಿರೋಡಾದ ಗೋಮಂತಕ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ. ನೀಲೇಶ್ ಪಿ. ಕೊರ್ಡೆ ಉಪಸ್ಥಿತರಿದ್ದರು.

ಕಲಾನಿಕೇತನದಲ್ಲಿ ತರಬೇತಿ ಪಡೆದು ವಿದ್ವತ್ ಪದವಿ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ನಿರ್ದೇಶಕಿ ಹಾಗೂ ಗುರು ವಿದುಷಿ ವಿದ್ಯಾ ಮನೋಜ್ ಸ್ವಾಗತಿಸಿದರು. ವಿದುಷಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮಣ್ ಅಗ್ರಬೈಲು ಧನ್ಯವಾದ ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಪುಷ್ಪಾಂಜಲಿ, ರಾಮ ರಾಮಾಯಣ, ಕೃಷ್ಣಾ ಲೀಲೆ, ಮಹಿಷಮರ್ಧಿನಿ, ಅಯಗಿರಿನಂದಿನಿ, ತಿಲ್ಲಾಣ ನೃತ್ಯ ರೂಪಕ ನಡೆಯಿತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.